Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.7 : ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗಕ್ಕೆ ಪ್ರತ್ಯೇಕ ಗುರುತಿನ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಕೋಡ್ ಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಪ್ರದೇಶದಾದ್ಯಂತ ಹಮ್ಮಿಕೊಂಡಿರುವ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದ 9ನೇ ಸರಣಿ ನ.11 ರಂದು ಬೆಳಿಗ್ಗೆ 10.30 ಗಂಟೆಗೆ ಕಡಿಯತ್ನಾಡ್-ಬೆಪ್ಪುನಾಡ್ ನಡುವಿನ ಕಡಂಗದಲ್ಲಿ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಕೊಡವ ಜನಾಂಗದ ಅಸ್ತಿತ್ವ, ಗುರುತು, ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ ಹಾಗೂ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯದ ರಕ್ಷಣೆಗಾಗಿ ಈ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಪ್ರಮುಖ ಬೇಡಿಕೆಗಳು* ಕೊಡವಲ್ಯಾಂಡ್‌ಗೆ ಸಂವಿಧಾನದ 244 ಮತ್ತು 371ನೇ ವಿಧಿ ಹಾಗೂ 5 ಮತ್ತು 6ನೇ ಶೆಡ್ಯೂಲ್ ಅಡಿಯಲ್ಲಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಮಾನ್ಯತೆ ನೀಡಬೇಕು. ವಿಶ್ವಸಂಸ್ಥೆಯ ಚಾರ್ಟರ್ ಹಾಗೂ ಸಂವಿಧಾನದ ಅಡಿಯಲ್ಲಿ ಕೊಡವ ಜನಾಂಗಕ್ಕೆ ಆದಿಮಸಂಜಾತ ಸಮುದಾಯವಾಗಿ ವಿಶೇಷ ಸಂವಿಧಾನಬದ್ಧ ಮಾನ್ಯತೆ ನೀಡಬೇಕು. ಕೊಡವರ ಪವಿತ್ರ ಗನ್-ತೋಕ್ ಸಂಪ್ರದಾಯವನ್ನು ಸಂವಿಧಾನದ 25, 26 ಮತ್ತು 28ನೇ ವಿಧಿಗಳ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿ ಮುಂದುವರಿಸಲು ಅವಕಾಶ ನೀಡಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ ಮಾದರಿಯಲ್ಲಿ ಕೊಡವ ಜನಾಂಗಕ್ಕೂ ಪ್ರತ್ಯೇಕ ಅಮೂರ್ತ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳನ್ನು ಕಲ್ಪಿಸಬೇಕು. ಶಾಸ್ತಿçÃಯ ಕೊಡವತಕ್ಕ್ ಭಾಷೆಯನ್ನು ಸಂವಿಧಾನದ 8ನೇ ಅನುಸೂಚಿಗೆ ಸೇರಿಸಬೇಕು ಹಾಗೂ ಕೆಳದಿ, ಪಾಲೇರಿ ರಾಜರು ಮತ್ತು ನಂತರ ಬ್ರಿಟಿಷರ ವಶಕ್ಕೆ ಹೋದ ಕೊಡವರ ವಂಶಪಾರಂಪರ್ಯ ಆಸ್ತಿಗಳನ್ನು ವಿಶ್ವಸಂಸ್ಥೆಯ ಆದಿಮಸಂಜಾತ ಆಸ್ತಿ ಮರುಪಡೆಯುವ ಹಕ್ಕುಗಳಡಿಯಲ್ಲಿ ಮರಳಿ ಕೊಡವರಿಗೆ ಹಸ್ತಾಂತರಿಸಬೇಕು.
*ಕೊಡವರಿಗೆ ಪ್ರತ್ಯೇಕ ಕೋಡ್ ಗೆ ಒತ್ತಾಯ* 2027ರ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಆದಿಮಸಂಜಾತ ಏಕಜನಾಂಗೀಯ ಪ್ರಕೃತಿ ಆರಾಧಕ ಕೊಡವ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಿ, ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕು. 1871-72ರಿಂದ 1941ರವರೆಗಿನ ಜನಗಣತಿಗಳಲ್ಲಿ ಕೊಡವರನ್ನು ಪ್ರತ್ಯೇಕ ಜನಾಂಗೀಯ ಸಮುದಾಯವಾಗಿ ದಾಖಲಿಸಲಾಗಿತ್ತು. ಆದರೆ 1941ರ ನಂತರ ಕೊಡವರ ಪ್ರತ್ಯೇಕ ಗುರುತನ್ನು ಅಳಿಸಿ ದೊಡ್ಡ ಸಮುದಾಯಗಳೊಂದಿಗೆ ವಿಲೀನಗೊಳಿಸಲಾಯಿತು. 1956ರವರೆಗೆ ಪ್ರತ್ಯೇಕ ‘ಸಿ’ ಸ್ಟೇಟ್ ಕೊಡಗು ಅಸ್ತಿತ್ವದಲ್ಲಿದ್ದು, ರಾಜ್ಯ ಮರುಸಂಘಟನಾ ಕಾಯ್ದೆಯ ಮೂಲಕ ಕರ್ನಾಟಕದೊಂದಿಗೆ ವಿಲೀನಗೊಳಿಸಲಾಯಿತು. ಈ ಎರಡೂ ಬೆಳವಣಿಗೆಗಳು ಕೊಡವ ಜನಾಂಗದ ಗುರುತಿನ ನಷ್ಟಕ್ಕೆ ಕಾರಣವಾದ ಐತಿಹಾಸಿಕ ಅನ್ಯಾಯಗಳಾಗಿವೆ ಎಂದು ಎನ್.ಯು.ನಾಚ್ಚಪ್ಪ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದು ವಾಣಿಜ್ಯ ಉದ್ದೇಶಗಳಿಗಾಗಿ ಭೂ ಪರಿವರ್ತನೆಗೆ ಅವಕಾಶ ಮಾಡಿಕೊಡುತ್ತಿರುವುದರಿಂದ ಕೊಡಗಿನ ಭೂಮಿ ಹೊರಗಿನ ಬಂಡವಾಳಶಾಹಿಗಳ ಪಾಲಾಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಭೂಮಿ ಖರೀದಿಸಿ ಮೆಗಾ ಟೌನ್‌ಶಿಪ್‌ಗಳು, ಬೃಹತ್ ರೆಸಾರ್ಟ್ಗಳು ಹಾಗೂ ಲೇಔಟ್‌ಗಳನ್ನು ನಿರ್ಮಿಸುತ್ತಿರುವುದು ಕೊಡಗಿನ ಪರಿಸರ ಮತ್ತು ಕೃಷಿ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇಂತಹ ಬೆಳವಣಿಗೆಗಳು ಕಾವೇರಿ ನದಿಯ ಜೀವನದಿ ಮೂಲಗಳು, ಕಾಫಿ ತೋಟಗಳು, ಕೃಷಿ ಪ್ರದೇಶಗಳು ಹಾಗೂ ನಿತ್ಯಹರಿದ್ವರ್ಣ ಅರಣ್ಯಗಳ ಮೇಲೆ ಪರಿಣಾಮ ಬೀರುತ್ತಿವೆ. ಇಂತಹ ಬೆಳವಣಿಗೆಗಳು ಕೊಡಗಿನ ಜನಸಂಖ್ಯಾ ಮತ್ತು ಭೌಗೋಳಿಕ ಸ್ವರೂಪದಲ್ಲಿ ಬದಲಾವಣೆಗೆ ಕಾರಣವಾಗುತ್ತಿದ್ದು, ಸಂವಿಧಾನದ 51ಂ(ಜಿ) ವಿಧಿ ಹಾಗೂ ವಿಶ್ವಸಂಸ್ಥೆಯ ಮೂಲನಿವಾಸಿಗಳ ಹಕ್ಕುಗಳ ಘೋಷಣೆಯ ಆಶಯಗಳಿಗೆ ವಿರುದ್ಧವಾಗಿವೆ ಎಂದು ತಿಳಿಸಿದ್ದಾರೆ. ಕೊಡವ ಜನಾಂಗ, ಕೊಡವಲ್ಯಾಂಡ್ ಮತ್ತು ಕೊಡವ ಗುರುತಿನ ರಕ್ಷಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.