ವಿರಾಜಪೇಟೆ, NEWS DESK ನ.9: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಒಟ್ಟು 31 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದು, 4×100 ಮೀಟರ್ ರಿಲೇ ಬಾಲಕಿಯರ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ತಂಡವು 7ನೇ ಸ್ಥಾನ ಪಡೆದು ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿದೆ.
ತಂಡದಲ್ಲಿ ಬೊವ್ವೇರಿಯಂಡ ಹನ್ಸಿಕಾ ಪೊನ್ನಪ್ಪ, ಕುಲ್ಲಚಂಡ ಭೂಮಿಕ ಭೋಜಮ್ಮ, ರ್ನಂಡ ಶತಕ ಕಾವೇರಮ್ಮ ಹಾಗೂ ರ್ನಂಡ ಕೃತಿಕ ಅಕ್ಕಮ್ಮ ಸ್ಪರ್ಧಿಸಿ ಉತ್ತಮ ಸಾಧನೆ ಮೆರೆದಿದ್ದಾರೆ.
ತಂಡದ ಕೋಚ್ ಕುಮ್ಮಂಡ ಶ್ರೀಮಾನ್ ದಿವಿನ್ ಅವರ ಉತ್ತಮ ತರಬೇತಿ ಹಾಗೂ ಮಾರ್ಗದರ್ಶನ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ. ಶಾಲೆಯ ದೈಹಿಕ ಶಿಕ್ಷಕಿಯರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ವಿದ್ಯಾರ್ಥಿನಿಯರಿಗೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬೊವ್ವೇರಿಯಂಡ ಹನ್ಸಿಕಾ ಪೊನ್ನಪ್ಪ ಅವರ ತಾಯಿ ಶ್ರೀಮತಿ ಬೊವ್ವೇರಿಯಂಡ ಉಷಾ ಉಪಸ್ಥಿತರಿದ್ದು, ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡಿದರು.
ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧೇಶ್ ಬಿ.ಎಸ್., ಕಾರ್ಯದರ್ಶಿ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು., ಸಂಯೋಜಕಿ ಅಮೃತ ಅರ್ಜುನ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
























