ಮಡಿಕೇರಿ, NEWS DESK ನ.11: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಹೋಬಳಿಯ ಪ್ರಜಾಸೇವಾ ಆಂದೋಲನವು ನವೆಂಬರ್ 14 ರಂದು ಬಲ್ಲಮಾವಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಜರುಗಲಿದೆ.
ಈ ಕುರಿತು ಮಾಹಿತಿ ನೀಡಿರುವ ತಹಶೀಲ್ದಾರರಾದ ಶ್ರೀಧರ ಅವರು, ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.






















