ಸುಂಟಿಕೊಪ್ಪ, NEWS DESK ನ.12: ಕೊಡಗರಹಳ್ಳಿ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪರಿಸರ ಮತ್ತು ಸುಸ್ಥಿರತೆ ದಿನದ ಅಂಗವಾಗಿ ‘ನಮ್ಮ ಭೂಮಿಯನ್ನು ರಕ್ಷಿಸಿ, ನಮ್ಮ ಭವಿಷ್ಯವನ್ನು ಸುರಕ್ಷಿತಗೊಳಿಸಿ’ ಎಂಬ ಘೋಷವಾಕ್ಯದೊಂದಿಗೆ ಚಿಕ್ಲಿಹೊಳೆ ಜಲಾಶಯದ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಿದರು.
ಗುರುವಾರ ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶ್ರಮದಾನದಲ್ಲಿ ಪಾಲ್ಗೊಂಡು, ಜಲಾಶಯದ ಸುತ್ತಮುತ್ತ ಬಿದ್ದಿದ್ದ ಕಸವನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು. ಈ ಮೂಲಕ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾವೇರಿ ನೀರಾವರಿ ನಿಗಮದ ಸಹಾಯಕ ಎಂಜಿನಿಯರ್ ಕಿರಣ್ ಡಿ.ಡಿ. ಅವರು ವಿದ್ಯಾರ್ಥಿಗಳಿಗೆ ತಂಪು ಪಾನೀಯ, ಕುಡಿಯುವ ನೀರು ಹಾಗೂ ತಿನಿಸುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಕವಿತಾ, ಶಾಲೆಯ ಸ್ಕೌಟ್ ಮಾಸ್ಟರ್ಗಳಾದ ಕುಮಾರಿ ಮತ್ತು ಸುನಿಲ್ ಕುಮಾರ್, ಗೈಡ್ ಶಿಕ್ಷಕಿ ಆಶಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಈ ಪರಿಸರ ಸ್ನೇಹಿ ಸೇವಾ ಕಾರ್ಯಕ್ಕೆ ಕಂಬಿಬಾಣೆ ಹಾಗೂ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಗಳ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
















