ಮಡಿಕೇರಿ NEWS DESK ನ.13 : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮವು ನವೆಂಬರ್ 16ರಿಂದ ಡಿಸೆಂಬರ್ 7ರವರೆಗೆ ನಾಲ್ಕು ಕಾರ್ತಿಕ ಸೋಮವಾರಗಳಂದು ನಡೆಯಲಿದೆ. ನವೆಂಬರ್ 16, 23, 30 ಹಾಗೂ ಡಿಸೆಂಬರ್ 7ರಂದು ಕಾರ್ತಿಕ ಸೋಮವಾರದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಪ್ರತಿದಿನ ಸಂಜೆ 7 ಗಂಟೆಗೆ ದೀಪೋತ್ಸವ ಸಂಕಲ್ಪ, ಪೂಜೆ, ರುದ್ರಾಭಿಷೇಕ ಹಾಗೂ ಮೃತ್ಯುಂಜಯ ಪೂಜೆ ನೆರವೇರಲಿದೆ. ರಾತ್ರಿ 9 ಗಂಟೆಗೆ ಮಹಾಪೂಜೆ ಹಾಗೂ 9.30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.
ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಕೆ.ಶಶಿ ಜನಾರ್ಧನ ಮನವಿ ಮಾಡಿದ್ದಾರೆ.
















