ಮಡಿಕೇರಿ, NEWS DESK ನ.13: ಜೋಡುಪಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮದೆನಾಡಿನ ಯುವ ಯೋಗಸಾಧಕಿ ಸಿಂಚನಾ ಅವರು ವಿವಿಧ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳ ಗಮನ ಸೆಳೆದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ಅದರ ಪ್ರಯೋಜನಗಳು ಹಾಗೂ ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಯೋಗ ಸಿಂಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಗಾಸನಗಳನ್ನು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ದಮಯಂತಿ, ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು, ಅಂಗನವಾಡಿ ಶಿಕ್ಷಕಿ ಮನೋಹರಿ, ಶಿಕ್ಷಕೇತರ ಸಿಬ್ಬಂದಿ, ಶಾಲಾ ಆಡಳಿತ ಮಂಡಳಿ, ದೇವರಕೊಲ್ಲಿ ದೇವಸ್ಥಾನದ ಅಧ್ಯಕ್ಷ ಯಶೋಧರ ಹಾಗೂ ಸಿಂಚನಾ ಅವರ ಪೋಷಕರಾದ ಕೀರ್ತಿ ಕುಮಾರ್ ಮತ್ತು ರೇಣುಕಾ ಉಪಸ್ಥಿತರಿದ್ದರು.
















