ಮಡಿಕೇರಿ, NEWS DESK ನ.13: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ, ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಕುಶಾಲನಗರ ತಾಲ್ಲೂಕಿಗೆ ಮಾತ್ರ ಈ ಯೋಜನೆಯಡಿ ಒಟ್ಟು 99 ಫಲಾನುಭವಿಗಳ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿಗೆ ಶೇ.17, ಪರಿಶಿಷ್ಟ ಪಂಗಡಕ್ಕೆ ಶೇ.7, ಹಿಂದುಳಿದ ವರ್ಗಕ್ಕೆ ಶೇ.32 ಹಾಗೂ ಸಾಮಾನ್ಯ ವರ್ಗಕ್ಕೆ ಶೇ.44ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
ಮೀಸಲಾತಿ ಅನ್ವಯ ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು.
ಆಸಕ್ತ ಗ್ರಾಮೀಣ ರೈತ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದು.
-
ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ: 9448422269
-
ಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ, ಸುಂಟಿಕೊಪ್ಪ: 9880967832
-
ಪಶುವೈದ್ಯಾಧಿಕಾರಿಗಳು, ಪಶು ಚಿಕಿತ್ಸಾಲಯ, ಹೆಬ್ಬಾಲೆ: 7349320828
ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನವೆಂಬರ್ 23ರೊಳಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ ಕಚೇರಿಗೆ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















