ಮಡಿಕೇರಿ, NEWS DESK ನ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 15ರಂದು ಶ್ರೀ ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಪ್ರಯುಕ್ತ ‘ಜನ್ಜಾತೀಯ ಗೌರವ ದಿವಸ್’ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10 ಗಂಟೆಗೆ ತಿತಿಮತಿಯ ಮರೂರಿನ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಆವರಣದಿಂದ ಮೆರವಣಿಗೆ ನಡೆಯಲಿದ್ದು, ಬಳಿಕ ಬೆಳಗ್ಗೆ 10.30 ಗಂಟೆಗೆ ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ ಹಾಗೂ ಡಾ. ಧನಂಜಯ ಸರ್ಜಿ ಪಾಲ್ಗೊಳ್ಳಲಿದ್ದಾರೆ.
ಇದರೊಂದಿಗೆ ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಟಿ.ಎಂ. ಧರ್ಮಜ ಉತ್ತಪ್ಪ, ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಪಿ.ವಿ. ಜಾನ್ಸನ್ (ವಿರಾಜಪೇಟೆ) ಹಾಗೂ ಕಾಳೇಮಾಡ ಪ್ರಶಾಂತ್ (ಪೊನ್ನಂಪೇಟೆ) ಭಾಗವಹಿಸಲಿದ್ದಾರೆ.
ಅಕ್ಕ ಐಎಎಸ್ ಅಕಾಡೆಮಿಯ ಸ್ಥಾಪಕ ನಿರ್ದೇಶಕ ಡಾ. ಶಿವಕುಮಾರ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದು, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.















