ಮಡಿಕೇರಿ, NEWS DESK ನ.13: ಸೋಮವಾರಪೇಟೆ ತಾಲ್ಲೂಕಿನ ಪ್ರಜಾಸೇವಾ ಅಭಿಯಾನವು ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14ರಂದು ಬೆಳಗ್ಗೆ 10 ಗಂಟೆಗೆ ಬೇಳೂರು ಬಸವನಹಳ್ಳಿ (ಬೇಳೂರು ಕುಸುಬೂರು) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ನಡೆಯಲಿದೆ.
ಸೋಮವಾರಪೇಟೆ ಹೋಬಳಿಯಲ್ಲಿ ನಡೆಯಲಿರುವ ಈ ಅಭಿಯಾನದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ವಿವಿಧ ಸರ್ಕಾರಿ ಇಲಾಖೆಗಳ ಸೇವೆಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.















