ಮಡಿಕೇರಿ, NEWS DESK ನ.13: ನಗರದ ಪ್ರಮುಖ ಪ್ರವಾಸಿ ತಾಣವಾದ ರಾಜಾಸೀಟ್ಗೆ ನವೆಂಬರ್ 16ರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಮೇಜರ್ ಮುತ್ತಣ್ಣ ವೃತ್ತದಿಂದ ರಾಜಾಸೀಟ್ಗೆ ತೆರಳುವ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜೆ. ಅವರು ಈ ಆದೇಶ ಹೊರಡಿಸಿದ್ದಾರೆ.
ನವೆಂಬರ್ 16ರಿಂದ 30ರವರೆಗೆ ರಾಜಾಸೀಟ್ಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ಅಡ್ಡ ರಸ್ತೆಯಿಂದ ಲಿವಾ ಕ್ಲಿನಿಕ್ವರೆಗೆ ನವೆಂಬರ್ 16ರಿಂದ ಡಿಸೆಂಬರ್ 15ರವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಸುಗಮವಾಗಿ ನಡೆಯಲು ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.















