ಮಡಿಕೇರಿ, NEWS DESK ನ.13: ಹಾರಂಗಿ ಹಿನ್ನೀರಿನಲ್ಲಿ ಬೋಟ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.
ಮೃತರನ್ನು ಗುಜರಾತ್ನ ಸೂರತ್ ಮೂಲದ ಧರ್ಮೇಶ್ (50) ಹಾಗೂ ನಿಮ್ಮಿ (48) ಎಂದು ಗುರುತಿಸಲಾಗಿದೆ. ಇವರೊಂದಿಗೆ ದೋಣಿಯಲ್ಲಿದ್ದ 21 ಮತ್ತು 24 ವರ್ಷದ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.
ದೋಣಿ ಚಾಲಕನ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ದೋಣಿ ವಿಹಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
















