Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ.21ರಿಂದ ಮಡಿಕೇರಿಯಲ್ಲಿ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ : 8 ಫ್ರಾಂಚೈಸಿಗಳ ನಡುವೆ ಸೆಣಸಾಟ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಿ.21ರಿಂದ ಮಡಿಕೇರಿಯಲ್ಲಿ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ : 8 ಫ್ರಾಂಚೈಸಿಗಳ ನಡುವೆ ಸೆಣಸಾಟ

ನವೆಂಬರ್ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.14 : ಕೊಡಗು ಗೌಡ ಯುವ ವೇದಿಕೆ ವತಿಯಿಂದ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ (ಜಿಪಿಎಲ್) ಲೆದರ್ ಬಾಲ್ ಟಿ-10 ಕ್ರಿಕೆಟ್ ಪಂದ್ಯಾವಳಿ ಡಿ.21ರಿಂದ 27ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡ ಜನಾಂಗದವರಿಗಾಗಿ ಆಯೋಜಿಸಲಾಗುತ್ತಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 8 ಫ್ರಾಂಚೈಸಿಗಳು ಪಾಲ್ಗೊಳ್ಳಲಿವೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದರು. ಮಡಿಕೇರಿಯಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕೊಡಗು ಗೌಡ ಯುವ ವೇದಿಕೆ ಜನಾಂಗದ ಯುವಜನರಿಗೆ ಕ್ರೀಡಾ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿವಿಧ ಕ್ರೀಡಾಕೂಟ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. 2023ರಲ್ಲಿ ಮೊದಲ ಬಾರಿಗೆ ಮನರಂಜನಾ ಕ್ರಿಕೆಟ್‌ನಿಂದ ವೃತ್ತಿಪರ ಕ್ರಿಕೆಟ್ ನತ್ತ ಯುವ ಪ್ರತಿಭೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಲೆದರ್ ಬಾಲ್ ಕ್ರಿಕೆಟ್ ಪರಿಚಯಿಸಲಾಯಿತು. ಕಳೆದ ಮೂರು ವರ್ಷಗಳಿಂದ ಪಂದ್ಯಾವಳಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಇದೀಗ ಗ್ರಾಮೀಣ ಪ್ರದೇಶಗಳಲ್ಲಿಯೂ ಲೆದರ್ ಬಾಲ್ ಕ್ರಿಕೆಟ್‌ಗೆ ಅಗತ್ಯ ಮೂಲಸೌಕರ್ಯಗಳು ರೂಪುಗೊಳ್ಳುತ್ತಿವೆ ಎಂದರು. 2026ರ ಸೀಸನ್-4ರಲ್ಲಿ ಕಳೆದ ಬಾರಿಯ ದಿ ಎಲೈಟ್, ಜಿ ಕಿಂಗ್ ಸಿದ್ದಲಿಂಗಪುರ, ಕೂರ್ಗ್ ಹಾಕ್ಸ್ ಮಡಿಕೇರಿ, ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ, ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಪುತ್ತೂರಿನ ಯುವ ತಂಡ, ಮರಗೋಡು ಹಾಗೂ ಕುಶಾಲನಗರ ತಂಡಗಳು ಸೇರಿದಂತೆ ಒಟ್ಟು ಎಂಟು ಫ್ರಾಂಚೈಸಿಗಳು ಭಾಗವಹಿಸಲಿವೆ. ನ.27ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪಂದ್ಯಾವಳಿಯ ವಿಜೇತ ತಂಡಕ್ಕೆ ಒಂದು ಲಕ್ಷ ರೂ. ನಗದು ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 60 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಇದರೊಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭ 2023ರಲ್ಲಿ ಬಿಡುಗಡೆ ಮಾಡಿದ್ದ ಗೌಡ ಸಂಸ್ಕೃತಿ ಮತ್ತು ಬಲಿದಾನದ ಪ್ರತೀಕವಾದ ಆಕರ್ಷಕ ಟ್ರೋಫಿ ಸೇರಿದಂತೆ ಹಲವು ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು. ಈ ಬಾರಿ ಕಳೆದ ಮೂರು ವರ್ಷಗಳಿಗಿಂತಲೂ ವಿಜೃಂಭಣೆಯಿAದ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದೇ ಸಂದರ್ಭ ಒಕ್ಕಲಿಗ ಗೌಡ ಮಹಿಳೆಯರಿಗಾಗಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು. ಈಗಾಗಲೇ ಜಿಪಿಎಲ್ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಹೊರಹೊಮ್ಮಿದ್ದು, ಗೌಡ ಜನಾಂಗದ ಪುರುಷ ಹಾಗೂ ಮಹಿಳಾ ಆಟಗಾರರು ರಾಜ್ಯಮಟ್ಟದ ಕ್ರಿಕೆಟ್ ತಂಡಗಳಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ರಿಷಿತ್ ಮಾದಯ್ಯ ತಿಳಿಸಿದರು.
2026ರ ಮೇ ತಿಂಗಳಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದ ಗೌಡ ಕುಟುಂಬವಾರು ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು 2027ರಲ್ಲಿ ಏಪ್ರಿಲ್ 16ರಿಂದ ಮೇ 2ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿಯೂ ರಿಂಕ್ ಹಾಕಿ ಸ್ಪರ್ಧೆ ಇರಲಿದೆ ಎಂದರು. *ಸರಕಾರದ ಅನುದಾನಕ್ಕೆ ಆಗ್ರಹ*
ಕೊಡಗು ಗೌಡ ಯುವ ವೇದಿಕೆ ಕಳೆದ 25 ವರ್ಷಗಳಿಂದ ಗೌಡ ಜನಾಂಗದ ಕ್ರೀಡಾಕೂಟಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಸರಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಈ ಬಾರಿಯಾದರೂ ಸರಕಾರ ಜನಾಂಗದ ಕ್ರೀಡೆ ಹಾಗೂ ಸಂಸ್ಕೃತಿಯ ಅಭಿವೃದ್ಧಿಗೆ ಸಹಕರಿಸಬೇಕು. ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕರು ಈ ಬಗ್ಗೆ ಆಸಕ್ತಿ ವಹಿಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿವರ್ಷ ಶಾಸಕರಿಂದ ಅನುದಾನದ ಭರವಸೆ ದೊರೆಯುತ್ತಿದೆಯೇ ಹೊರತು ಅನುದಾನ ಬಿಡುಗಡೆಯಾಗುತ್ತಿಲ್ಲ. ಈ ಬಾರಿಯೂ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಅನುದಾನ ನೀಡದಿದ್ದಲ್ಲಿ ಗೌಡ ಜನಾಂಗದ ಕ್ರೀಡೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದ್ದೇವೆ ಎಂದು ಎಚ್ಚರಿಕೆ ನೀಡಿದರು. *ಆಟಗಾರರ ನೋಂದಣಿ ಆರಂಭ* ಜಿಪಿಎಲ್ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಟಿ-10 ಕ್ರಿಕೆಟ್ ಪಂದ್ಯಾವಳಿಗೆ ಆಟಗಾರರ ನೋಂದಣಿ ಪ್ರಕ್ರಿಯೆ ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಆರಂಭಗೊoಡಿದ್ದು, ನವೆಂಬರ್ 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 8105160547, 9972376151, 9663253025 ಹಾಗೂ 7019671130 ಸಂಪರ್ಕಿಸಬಹುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವ ವೇದಿಕೆ ಅಧ್ಯಕ್ಷ ಬಾಳಾಡಿ ಮನೋಜ್, ಉಪಾಧ್ಯಕ್ಷ ಪರಿಚನ ಸತೀಶ್, ಕಾರ್ಯದರ್ಶಿ ಕೆದಂಬಾಡಿ ಕಾಂಚನ ಗೌಡ, ಕೋಶಾಧಿಕಾರಿ ನವೀನ್ ದೇರಳ ಹಾಗೂ ಕ್ರೀಡಾಧ್ಯಕ್ಷ ಕುಟ್ಟನ ಪ್ರಶಾಂತ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಾರುಗುಂದದಲ್ಲಿ 73ನೇ ಸಹಕಾರ ಸಪ್ತಾಹ ಆಚರಣೆ : ಹಿರಿಯ ಸಹಕಾರಿಗಳಿಗೆ ಸನ್ಮಾನ

ನವೆಂಬರ್ 14, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲ, NEWS DESK ನ.14: ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು…

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ದೇವರಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ

ನವೆಂಬರ್ 14, 2026

ಡಿ.21ರಿಂದ ಮಡಿಕೇರಿಯಲ್ಲಿ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ : 8 ಫ್ರಾಂಚೈಸಿಗಳ ನಡುವೆ ಸೆಣಸಾಟ

ನವೆಂಬರ್ 14, 2026

ಹಾರಂಗಿ ಹಿನ್ನೀರಿನಲ್ಲಿ ದುರಂತ: ಸ್ಪೀಡ್ ಬೋಟ್ ಮಗುಚಿ ಪ್ರವಾಸಿ ದಂಪತಿ ಸಾವು, ಇಬ್ಬರು ಮಕ್ಕಳು ಪಾರು

ನವೆಂಬರ್ 13, 2026

ಹುದಿಕೇರಿ 50 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ನವೆಂಬರ್ 13, 2026

ಮಡಿಕೇರಿ ರಾಜಾಸೀಟ್‌ಗೆ ನ.16ರಿಂದ ಪ್ರವಾಸಿಗರ ಪ್ರವೇಶ ನಿರ್ಬಂಧ

ನವೆಂಬರ್ 13, 2026

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಮಿನಿ ಬಸ್‌ಗೆ ಕಂಟೈನರ್ ಟ್ರಕ್ ಡಿಕ್ಕಿ, 23 ಮಂದಿ ಸಾವು

ನವೆಂಬರ್ 13, 2026

ಯುವಜನರ ವೈಜ್ಞಾನಿಕ ಕನಸುಗಳಿಗೆ COSMOS–ಮೈಸೂರು ಹೊಸ ವೇದಿಕೆ: ಪ್ರಧಾನಿ ಮೋದಿ; ಚಂದ್ರಯಾನ-3, ಆದಿತ್ಯ ಎಲ್-1, ಗಗನಯಾನ ಭಾರತದ ಬಾಹ್ಯಾಕಾಶ ಸಾಧನೆಗೆ ಸಾಕ್ಷಿ: ನರೇಂದ್ರ ಮೋದಿ

ನವೆಂಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.