Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಚೆಟ್ಟಳ್ಳಿ, NEWS DESK ನ.14: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 50ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ, 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಂಘದ ವತಿಯಿಂದ ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ ಮಾಡಲಾಯಿತು.

ಸಹಕಾರ ಧ್ವಜಾರೋಹಣ ಮಾಡುವ ಮೂಲಕ 73ನೇ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ದೇಶಾದ್ಯಂತ ನವೆಂಬರ್ 14ರಿಂದ ಸಹಕಾರ ಸಪ್ತಾಹ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಚೆಟ್ಟಳ್ಳಿ ಸಹಕಾರ ಸಂಘದಲ್ಲಿಯೂ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ಖಾಸಗಿ ಬ್ಯಾಂಕುಗಳೊಂದಿಗೆ ಪೈಪೋಟಿ ನಡೆಸುತ್ತಾ, ಸರ್ಕಾರದ ಯಾವುದೇ ಅನುದಾನವಿಲ್ಲದೆ ರೈತರ ಹಣದಿಂದಲೇ ಸಹಕಾರ ಸಂಘಗಳು ಮುನ್ನಡೆಯುತ್ತಿವೆ. ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸುವ ಮೂಲಕ ಇನ್ನಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು.

ಚೆಟ್ಟಳ್ಳಿ ಸಹಕಾರ ಸಂಘವು 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ ಮಾಡುವ ಮೂಲಕ ಸಂಭ್ರಮಾಚರಣೆಗೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸಮಾರೋಪ ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯರು ಹಾಗೂ ಅವರ ಕುಟುಂಬದ ಹಿರಿಯರನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

ಸುವರ್ಣ ಮಹೋತ್ಸವ ಸಮಿತಿಗೆ ಸಂಘದ ಮಾಜಿ ಉಪಾಧ್ಯಕ್ಷರಾದ ಹೆಚ್.ಎಸ್. ತಿಮ್ಮಪಯ್ಯ, ಕಣಜಾಲು ಪೂವಯ್ಯ, ಪತ್ರಕರ್ತ ಪುತ್ತರಿರ ಕರುಣ್ ಕಾಳಯ್ಯ, ಮಾಜಿ ನಿರ್ದೇಶಕರಾದ ಪುತ್ತರಿರ ಸೀತಮ್ಮ ಮೊಣ್ಣಪ್ಪ ಹಾಗೂ ನೂಜಿಬೈಲು ನಾಣಯ್ಯ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಎಸ್. ಸ್ವಾಗತಿಸಿದರು. ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ವಂದಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪೇರಿಯನ ಎಸ್. ಪೂರ್ಣಚ್ಚ, ನಿರ್ದೇಶಕರಾದ ಕೊಂಗೇಟಿರ ವಾಣಿ ಕಾಳಪ್ಪ, ಅಕ್ಕಾರಿ ದಯಾನಂದ, ಬಟ್ಟೀರ ವೇಣುಗೋಪಾಲ್ (ಶರಿನ್), ಮುಳ್ಳಂಡ ಮಾಯಮ್ಮ ತಮ್ಮಯ್ಯ, ಕರ್ನಯ್ಯನ ಪ್ರಜ್ವಲ್, ಕಾಶಿ ಬಿ.ಎಂ., ಮರದಾಳು ಚೇತನ್, ಗಣೇಶ್ ಪಿ.ಟಿ., ರವಿ ಜೆ.ಆರ್., ಪರಿಣತ ನಿರ್ದೇಶಕ ಮುಕ್ಕಾಟಿ ಪಳಂಗಪ್ಪ ಸೇರಿದಂತೆ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಾರುಗುಂದದಲ್ಲಿ 73ನೇ ಸಹಕಾರ ಸಪ್ತಾಹ ಆಚರಣೆ : ಹಿರಿಯ ಸಹಕಾರಿಗಳಿಗೆ ಸನ್ಮಾನ

ನವೆಂಬರ್ 14, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲ, NEWS DESK ನ.14: ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು…

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ದೇವರಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ

ನವೆಂಬರ್ 14, 2026

ಡಿ.21ರಿಂದ ಮಡಿಕೇರಿಯಲ್ಲಿ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ : 8 ಫ್ರಾಂಚೈಸಿಗಳ ನಡುವೆ ಸೆಣಸಾಟ

ನವೆಂಬರ್ 14, 2026

ಹಾರಂಗಿ ಹಿನ್ನೀರಿನಲ್ಲಿ ದುರಂತ: ಸ್ಪೀಡ್ ಬೋಟ್ ಮಗುಚಿ ಪ್ರವಾಸಿ ದಂಪತಿ ಸಾವು, ಇಬ್ಬರು ಮಕ್ಕಳು ಪಾರು

ನವೆಂಬರ್ 13, 2026

ಹುದಿಕೇರಿ 50 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ನವೆಂಬರ್ 13, 2026

ಮಡಿಕೇರಿ ರಾಜಾಸೀಟ್‌ಗೆ ನ.16ರಿಂದ ಪ್ರವಾಸಿಗರ ಪ್ರವೇಶ ನಿರ್ಬಂಧ

ನವೆಂಬರ್ 13, 2026

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಮಿನಿ ಬಸ್‌ಗೆ ಕಂಟೈನರ್ ಟ್ರಕ್ ಡಿಕ್ಕಿ, 23 ಮಂದಿ ಸಾವು

ನವೆಂಬರ್ 13, 2026

ಯುವಜನರ ವೈಜ್ಞಾನಿಕ ಕನಸುಗಳಿಗೆ COSMOS–ಮೈಸೂರು ಹೊಸ ವೇದಿಕೆ: ಪ್ರಧಾನಿ ಮೋದಿ; ಚಂದ್ರಯಾನ-3, ಆದಿತ್ಯ ಎಲ್-1, ಗಗನಯಾನ ಭಾರತದ ಬಾಹ್ಯಾಕಾಶ ಸಾಧನೆಗೆ ಸಾಕ್ಷಿ: ನರೇಂದ್ರ ಮೋದಿ

ನವೆಂಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.