Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾರುಗುಂದದಲ್ಲಿ 73ನೇ ಸಹಕಾರ ಸಪ್ತಾಹ ಆಚರಣೆ : ಹಿರಿಯ ಸಹಕಾರಿಗಳಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾರುಗುಂದದಲ್ಲಿ 73ನೇ ಸಹಕಾರ ಸಪ್ತಾಹ ಆಚರಣೆ : ಹಿರಿಯ ಸಹಕಾರಿಗಳಿಗೆ ಸನ್ಮಾನ

ನವೆಂಬರ್ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.14 : ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಕಾರುಗುಂದ, ಚೇರಂಬಾಣೆ ಮತ್ತು ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 73ನೇ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದಡಿ ಕಾರ್ಯಕ್ರಮ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಸಹಕಾರಿಗಳಾದ ಬೊಳ್ಳಾರಪಂಡ ಎಂ.ಚಂಗಪ್ಪ, ನಾಪಂಡ ಸಿ.ಗಣೇಶ, ಕುಂಜಿಲನ ಕೆ. ನಾಗೇಶ, ಕುಟ್ಟೇಟಿರ ಜಲೀನ ಉತ್ತಪ್ಪ, ಬೊಳ್ಳಂಡ ಪಿ.ಹರೀಶ್ ಕಾರ್ಯಪ್ಪ, ತಳೂರು ಎಂ.ಸೋಮಣ್ಣ, ನೈಯ್ಯಣಿ ಹೇಮಲತಾ ತಾರೇಂದ್ರ, ಬಾಚರಣಿಯಂಡ ಬಿ.ಗಣಪತಿ, ಬಿ.ಆರ್.ಶ್ರೀನಿವಾಸ ಮೂರ್ತಿ ಹಾಗೂ ಬೈಮನ ಎಂ.ಜಗದೀಶ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. *ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು* ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಅವರು ವರ್ಷಕ್ಕೊಮ್ಮೆ ಸಹಕಾರ ಸಪ್ತಾಹ ಆಚರಿಸಿದರೆ ಸಾಲದು. ಸಹಕಾರ ಸಪ್ತಾಹಕ್ಕೆ ಹಿರಿಯರು ಹೊಸ ಅರ್ಥವನ್ನು ನೀಡಿದ್ದು, ನಿರಂತರ ಕಾರ್ಯಕ್ರಮಗಳು ನಡೆಯುವಂತೆ ನೋಡಿಕೊಂಡಿದ್ದಾರೆ. ಸಹಕಾರಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಿರಿಯರು ಅಪಾರ ಶ್ರಮ ವಹಿಸಿದ್ದಾರೆ ಎಂದು ಹೇಳಿದರು. ದೇಶದಲ್ಲಿರುವ ಶೇ.80ರಷ್ಟು ರೈತರ ಹಿತ ಕಾಯುವ ಉದ್ದೇಶದಿಂದ ಸಹಕಾರಿ ಸಂಘಗಳು ಉದಯಿಸಿದವು. ರೈತರ ಅಭಿವೃದ್ಧಿ ಹಾಗೂ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಹಕಾರಿ ಕ್ಷೇತ್ರ ಮಹತ್ವದ ಪಾತ್ರ ವಹಿಸುತ್ತಿದೆ. ಆದ್ದರಿಂದ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಹೆಚ್.ಜೆ.ಸತೀಶ್ ಕುಮಾರ್, 1906ರಲ್ಲಿಯೇ ಭಾಗಮಂಡಲ ಭಾಗದಲ್ಲಿ ಸಹಕಾರ ಸಂಘ ಸ್ಥಾಪನೆಯಾಗಿತ್ತು. ಅಂದಿನ ಹಿರಿಯರು ಸಾಮಾಜಿಕ ಕಳಕಳಿ ಹಾಗೂ ಒಗ್ಗಟ್ಟಿನ ಮನೋಭಾವದಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಮನೋಭಾವವನ್ನು ಯುವಜನತೆ ಮೈಗೂಡಿಸಿಕೊಂಡು ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್.ಎರ‍್ಯಾಲಿ ಮಾದಯ್ಯ ಅವರು, ಹಿರಿಯರು ಕಟ್ಟಿ ಬೆಳೆಸಿದ ಸಹಕಾರಿ ಸಂಘಗಳನ್ನು ನಿಸ್ವಾರ್ಥ ಮನೋಭಾವದಿಂದ ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಹಿರಿಯರ ಮಾರ್ಗದರ್ಶನ ಮುಂದೆಯೂ ಅಗತ್ಯವಿದೆ ಎಂದು ತಿಳಿಸಿದರು. ಹಿಂದಿನ ಕಾಲದಲ್ಲಿ ವಾಹನ ಸೌಲಭ್ಯಗಳಿಲ್ಲದಿದ್ದರೂ ಹಿರಿಯರು ಕಾಲ್ನಡಿಗೆಯಲ್ಲಿಯೇ ಸಂಚರಿಸಿ ಸಹಕಾರಿ ಕ್ಷೇತ್ರವನ್ನು ಬೆಳೆಸಿದ್ದಾರೆ. ಅವರ ಪರಿಶ್ರಮದ ಫಲವಾಗಿ ಕೊಡಗಿನ ಸಹಕಾರಿ ಕ್ಷೇತ್ರ ಇಂದು ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ದಿನದ ಮಹತ್ವದ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಹಾಗೂ ಕೆಐಸಿಎಂ ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲ ಎಂ.ಎಂ ಉಪನ್ಯಾಸ ನೀಡಿದರು. ಹಿರಿಯ ಸಹಕಾರಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕ ಹೆಚ್.ಜೆ.ಸತೀಶ್ ಕುಮಾರ್ ಅವರನ್ನು ಇದೇ ಸಂದರ್ಭ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ವಿ.ಕೆ.ಅಜಯ್ ಕುಮಾರ್, ಪಿ.ಎನ್.ಚಂದ್ರಪ್ರಕಾಶ್, ಎಸ್.ಆರ್.ಸುನಿಲ್ ರಾವ್, ಎಂ.ಟಿ.ಸುಬ್ಬಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ನಿರ್ದೇಶಕ ಕೆ.ಎನ್.ಸತೀಶ್, ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎ.ಕಿಶೋರ್ ಕುಮಾರ್, ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ.ಸುಮನ್, ಸಹಕಾರ ಸಂಘಗಳ ಉಪನಿಬಂಧಕಿ ಶೈಲಜ, ಕಾರುಗುಂದ ಸಹಕಾರ ಸಂಘದ ಉಪಾಧ್ಯಕ್ಷ ಕೆ.ಸಿ.ತಿಮ್ಮಯ್ಯ ಸೇರಿದಂತೆ ಸಹಕಾರ ಕ್ಷೇತ್ರದ ಪ್ರತಿನಿಧಿಗಳು, ವಿವಿಧ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ನವೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲ, NEWS DESK ನ.14: ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು…

ಸುವರ್ಣ ಮಹೋತ್ಸವದ ಲೋಗೊ ಬಿಡುಗಡೆ; ಚೆಟ್ಟಳ್ಳಿ ಸಹಕಾರ ಸಂಘಕ್ಕೆ 50 ವರ್ಷದ ಸಂಭ್ರಮಾಚರಣೆಗೆ ಚಾಲನೆ

ನವೆಂಬರ್ 14, 2026

ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ; ಕನ್ನಡ ಅತ್ಯಂತ ಶ್ರೀಮಂತ ಭಾಷೆ: ಡಾ. ಜೆ. ಸೋಮಣ್ಣ

ನವೆಂಬರ್ 14, 2026

ದೇವರಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ

ನವೆಂಬರ್ 14, 2026

ಡಿ.21ರಿಂದ ಮಡಿಕೇರಿಯಲ್ಲಿ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ : 8 ಫ್ರಾಂಚೈಸಿಗಳ ನಡುವೆ ಸೆಣಸಾಟ

ನವೆಂಬರ್ 14, 2026

ಹಾರಂಗಿ ಹಿನ್ನೀರಿನಲ್ಲಿ ದುರಂತ: ಸ್ಪೀಡ್ ಬೋಟ್ ಮಗುಚಿ ಪ್ರವಾಸಿ ದಂಪತಿ ಸಾವು, ಇಬ್ಬರು ಮಕ್ಕಳು ಪಾರು

ನವೆಂಬರ್ 13, 2026

ಹುದಿಕೇರಿ 50 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ

ನವೆಂಬರ್ 13, 2026

ಮಡಿಕೇರಿ ರಾಜಾಸೀಟ್‌ಗೆ ನ.16ರಿಂದ ಪ್ರವಾಸಿಗರ ಪ್ರವೇಶ ನಿರ್ಬಂಧ

ನವೆಂಬರ್ 13, 2026

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಮಿನಿ ಬಸ್‌ಗೆ ಕಂಟೈನರ್ ಟ್ರಕ್ ಡಿಕ್ಕಿ, 23 ಮಂದಿ ಸಾವು

ನವೆಂಬರ್ 13, 2026

ಯುವಜನರ ವೈಜ್ಞಾನಿಕ ಕನಸುಗಳಿಗೆ COSMOS–ಮೈಸೂರು ಹೊಸ ವೇದಿಕೆ: ಪ್ರಧಾನಿ ಮೋದಿ; ಚಂದ್ರಯಾನ-3, ಆದಿತ್ಯ ಎಲ್-1, ಗಗನಯಾನ ಭಾರತದ ಬಾಹ್ಯಾಕಾಶ ಸಾಧನೆಗೆ ಸಾಕ್ಷಿ: ನರೇಂದ್ರ ಮೋದಿ

ನವೆಂಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.