Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಲ್ಲಮಾವಟಿಯಲ್ಲಿ ಪ್ರಜಾಸೇವಾ ಅಭಿಯಾನ: 80ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ; ಸಾರ್ವಜನಿಕರಿಗೆ ಮೂಲಸೌಲಭ್ಯ ಕಲ್ಪಿಸುವುದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿ: ಶಾಸಕ ಎ.ಎಸ್. ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಲ್ಲಮಾವಟಿಯಲ್ಲಿ ಪ್ರಜಾಸೇವಾ ಅಭಿಯಾನ: 80ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ; ಸಾರ್ವಜನಿಕರಿಗೆ ಮೂಲಸೌಲಭ್ಯ ಕಲ್ಪಿಸುವುದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿ: ಶಾಸಕ ಎ.ಎಸ್. ಪೊನ್ನಣ್ಣ

ನವೆಂಬರ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.14: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಚಂಗೇಟಿರ ವೇದಿಕೆ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಜಾಸೇವಾ ಅಭಿಯಾನದಲ್ಲಿ ಸಾರ್ವಜನಿಕರಿಂದ 80ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿಯಾನದಲ್ಲಿ ಕಂದಾಯ, ಅರಣ್ಯ, ಪಂಚಾಯತ್ ರಾಜ್, ಸೆಸ್ಕ್, ಲೋಕೋಪಯೋಗಿ, ಸಣ್ಣ ನೀರಾವರಿ, ಕೆಎಸ್‌ಆರ್‌ಟಿಸಿ ಹಾಗೂ ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳನ್ನು ಸಲ್ಲಿಸಿದರು.

ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರು, ಸಲ್ಲಿಕೆಯಾದ ಶೇ.99ರಷ್ಟು ಅರ್ಜಿಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿದೆ ಎಂದು ತಿಳಿಸಿದರು. ಕಾಡಾನೆ ದಾಳಿಯಿಂದ ಉಂಟಾದ ಬೆಳೆಹಾನಿಗೆ ಪರಿಹಾರ, ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ, ವಿದ್ಯುತ್ ಸಂಪರ್ಕ, ಬಸ್ ಸೌಲಭ್ಯ, ಸೇತುವೆ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯಗಳ ಕುರಿತು ಹೆಚ್ಚಿನ ಮನವಿಗಳು ಬಂದಿದ್ದು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಗಿದೆ ಎಂದರು.

ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಶ್ರದ್ಧೆಯಿಂದ ಕಾರ್ಯನಿರ್ವಹಿಸಿದರೆ ಸಾರ್ವಜನಿಕರ ಮನವಿಗಳಿಗೆ ಸಕಾಲದಲ್ಲಿ ಸ್ಪಂದಿಸಲು ಸಾಧ್ಯ. ಜನರಿಗೆ ಅಗತ್ಯವಿರುವ ಕನಿಷ್ಠ ಮೂಲಸೌಲಭ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಆತ್ಮತೃಪ್ತಿ ಮತ್ತು ಸಂತೋಷದಿಂದ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವುದು ಮತ್ತು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಲವು ಭಾಗಗಳಲ್ಲಿ ಈಗಾಗಲೇ ಪ್ರಜಾಸೇವಾ ಅಭಿಯಾನ ಆಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ ಮತ್ತು ವಿಶ್ವಾಸವನ್ನು ಉಳಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಮಂಜೂರಾತಿ ಆದೇಶ ಪತ್ರಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಕೈಗೊಳ್ಳಲಾಗಿರುವ ವಿವಿಧ ಯೋಜನೆಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು.

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ವಿಭಾಗದ ಎಂಜಿನಿಯರ್ ಭಾಸ್ಕರ್ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರ ಜನರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ತರುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಹಮ್ಮಿಕೊಂಡಿದೆ ಎಂದರು. ತಹಶೀಲ್ದಾರ್ ಶ್ರೀಧರ್ ಮಾತನಾಡಿ, ಜನರ ನೋವು ಮತ್ತು ಸಂಕಷ್ಟಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಈ ಅಭಿಯಾನ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಅಕ್ರಮ ಸಕ್ರಮ ಸಮಿತಿ ತಾಲ್ಲೂಕು ಅಧ್ಯಕ್ಷ ನೆರವಂಡ ಉಮೇಶ್, ಕಾವೇರಿ ಜಲಾನಯನ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ಅಬ್ದುಲ್ ರೆಹಮಾನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್, ಸೆಂಥಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೊಡ್ಡ ಪುಲಿಕೋಟು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಉಪ ತಹಶೀಲ್ದಾರ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗಾಳಿಬೀಡು ರಸ್ತೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಲು ಶಾಸಕ ಡಾ. ಮಂತರ್ ಗೌಡ ಖಡಕ್ ಸೂಚನೆ; ವಿಳಂಬ ಮುಂದುವರಿದರೆ ಗುತ್ತಿಗೆದಾರರಿಗೆ ಕಪ್ಪುಪಟ್ಟಿ, ಅಧಿಕಾರಿಗಳ ಅಮಾನತಿಗೆ ಎಚ್ಚರಿಕೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.16: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿ ಜಿಲ್ಲಾಸ್ಪತ್ರೆ…

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 2026

ಕೊಡವ ಮುಸ್ಲಿಂ ಅಸೋಸಿಯೇಷನ್‌ನಿಂದ ಕೆ.ಎಂ.ಎ. ವಿಶೇಷ ಶೈಕ್ಷಣಿಕ ಪುರಸ್ಕಾರ ವಿತರಣೆ; ಏಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 16, 2026

ಕರಾಟೆ ಸ್ಪರ್ಧೆಯಲ್ಲಿ ಅದ್ವೈತ್‌ಗೆ ದ್ವಿತೀಯ ಸ್ಥಾನ

ನವೆಂಬರ್ 16, 2026

 ಧಾರ್ಮಿಕ ಸ್ವಾತಂತ್ರ್ಯ, ಗೋಸಂರಕ್ಷಣಾ ಕಾಯ್ದೆ ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ವಿರೋಧ

ನವೆಂಬರ್ 16, 2026

ಕಾವೇರಿ ಶಾಲೆಯ ಮಕ್ಕಳ ದಿನಾಚರಣೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ; ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ಸ್ಮರಣಿಕೆ ವಿತರಣೆ

ನವೆಂಬರ್ 16, 2026

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 16, 2026

ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ನವೆಂಬರ್ 16, 2026

ಕೊಡವಲ್ಯಾಂಡ್ ಸ್ವಾಯತ್ತತೆ ಕೊಡವರ ನ್ಯಾಯಸಮ್ಮತ ಹಕ್ಕು: ಎನ್.ಯು. ನಾಚಪ್ಪ; ಟಿ. ಶೆಟ್ಟಿಗೇರಿಯಲ್ಲಿ ಸಿಎನ್‌ಸಿಯ 10ನೇ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.