ಸುಂಟಿಕೊಪ್ಪ, NEWS DESK ನ.14: ಗುಂಡುಗುಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಹಸಿರು ದೀಪಾವಳಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಲಾಯಿತು. ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳು ಹಾಗೂ ಮನರಂಜನಾ ಕ್ರೀಡಾಕೂಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ಪರಿಸರ ಕಾಳಜಿಯೊಂದಿಗೆ ಹಬ್ಬಗಳನ್ನು ಆಚರಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಗೌರಮಣಿ ಹಾಗೂ ಶಿಕ್ಷಕಿ ಪೂರ್ಣಿಮಾ ಉಪಸ್ಥಿತರಿದ್ದರು.
















