Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನವೆಂಬರ್ 22ರಂದು ಅಜ್ಜಿಕುಟ್ಟಿರ ಕುಟುಂಬ ಹಾಕಿ ಪಂದ್ಯಾವಳಿಯ ಲಾಂಛನ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನವೆಂಬರ್ 22ರಂದು ಅಜ್ಜಿಕುಟ್ಟಿರ ಕುಟುಂಬ ಹಾಕಿ ಪಂದ್ಯಾವಳಿಯ ಲಾಂಛನ ಬಿಡುಗಡೆ

ನವೆಂಬರ್ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, NEWS DESK ನ.14: ಕೊಡವ ಕುಟುಂಬಗಳ ಒಗ್ಗಟ್ಟು, ಸಂಸ್ಕೃತಿ, ಪರಂಪರೆ ಹಾಗೂ ಹಾಕಿ ಕ್ರೀಡೆಯ ಮೇಲಿನ ಪ್ರೀತಿಯನ್ನು ಪ್ರತಿಬಿಂಬಿಸುವ 27ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಆತಿಥ್ಯವನ್ನು ಅಜ್ಜಿಕುಟ್ಟಿರ ಕುಟುಂಬ ವಹಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪಂದ್ಯಾವಳಿಯ ಲಾಂಛನ ಬಿಡುಗಡೆ ಸಮಾರಂಭವನ್ನು ನವೆಂಬರ್ 22ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯು ಕೇವಲ ಕ್ರೀಡಾಕೂಟವಾಗಿರದೆ, ಕೊಡವರ ಸಂಸ್ಕೃತಿ, ಕುಟುಂಬ ಪರಂಪರೆ, ಒಗ್ಗಟ್ಟು ಹಾಗೂ ಕ್ರೀಡಾ ಸ್ಫೂರ್ತಿಯನ್ನು ಸಾರುವ ವಿಶಿಷ್ಟ ಕ್ರೀಡಾ ಉತ್ಸವವಾಗಿದೆ.

ನವೆಂಬರ್ 22ರ ಭಾನುವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಹಕ್ಕಿತಿಮ್ಮನಹಳ್ಳಿಯ ಕರ್ನಾಟಕ ರಾಜ್ಯ ಹಾಕಿ ಸಂಘದ ಆವರಣದಲ್ಲಿ ಲಾಂಛನ ಬಿಡುಗಡೆ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಂದ್ಯಾವಳಿಯ ಲಾಂಛನ ಬಿಡುಗಡೆ ಮಾಡಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಅಜ್ಜಿಕುಟ್ಟಿರ ಕುಟುಂಬದ ಕೌಟುಂಬಿಕ ಹಾಕಿ ಪಂದ್ಯಾವಳಿಯ ಅಧ್ಯಕ್ಷ ನರೇನ್ ಕಾರಿಯಪ್ಪ ಹಾಗೂ ಕುಟುಂಬದ ಅಧ್ಯಕ್ಷ ಅಜ್ಜಿಕುಟ್ಟಿರ ಚಂಗಪ್ಪ (ಸಜ್ಜನ್) ಸೇರಿದಂತೆ ಕುಟುಂಬದ ಪ್ರಮುಖರು ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಹಾಕಿ ಕ್ಷೇತ್ರದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು.

27ನೇ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಗೆ ಚಾಲನೆ ನೀಡುವ ಮಹತ್ವದ ಪೂರ್ವಭಾವಿ ಕಾರ್ಯಕ್ರಮವಾಗಿ ಲಾಂಛನ ಬಿಡುಗಡೆ ಸಮಾರಂಭ ಆಯೋಜಿಸಲಾಗಿದ್ದು, ಕೊಡವ ಹಾಕಿ ಅಭಿಮಾನಿಗಳು ಹಾಗೂ ಕ್ರೀಡಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ವಾರ್ಷಿಕ ಮಹಾಸಭೆ: ಸ್ಪಷ್ಟ ಯೋಜನೆ ರೂಪಿಸಿ ಅನುಷ್ಠಾನಕ್ಕೆ ಪ್ರಯತ್ನಿಸಿ – ಟಿ.ಎಲ್. ಪ್ರವೀಣ್

ನವೆಂಬರ್ 15, 2026

ನವೆಂಬರ್ 28ರಂದು ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ 

ನವೆಂಬರ್ 15, 2026

ಮಡಿಕೇರಿಯಲ್ಲಿ ಮಹಿಳಾ ಸಹಕಾರ ಸಂಘಗಳಿಂದ ಸಹಕಾರ ಸಪ್ತಾಹ : ಯುವತಿಯರ ಸಹಭಾಗಿತ್ವದಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಉನ್ನತಿಗೆ ಕೊಂಡೊಯ್ಯಲು ಕರೆ

ನವೆಂಬರ್ 15, 2026

ನವೆಂಬರ್ 28ರಂದು ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ 

ನವೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಂದಾ, NEWS DESK ನ.15: ಇತಿಹಾಸ ಪ್ರಸಿದ್ಧ ಬೊಟ್ಟಿಯತ್ ಮೂಂದ್ ನಾಡಿನ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕಾರ್ಯಕ್ರಮವನ್ನು ಇದೇ…

ಮಡಿಕೇರಿಯಲ್ಲಿ ಮಹಿಳಾ ಸಹಕಾರ ಸಂಘಗಳಿಂದ ಸಹಕಾರ ಸಪ್ತಾಹ : ಯುವತಿಯರ ಸಹಭಾಗಿತ್ವದಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಉನ್ನತಿಗೆ ಕೊಂಡೊಯ್ಯಲು ಕರೆ

ನವೆಂಬರ್ 15, 2026

ಮಕ್ಕಳ ದಿನಾಚರಣೆ ಅಂಗವಾಗಿ ನ.22ರಂದು 4 ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕೊಡಗಿನ ಎಲ್ಲಾ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ಶಿಲ್ಪಾ ಸತೀಶ್ ಮನವಿ

ನವೆಂಬರ್ 15, 2026

ಡಾ.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ವಿಳಂಬ : ದಲಿತ ಸಂಘರ್ಷ ಸಮಿತಿ ಅಸಮಾಧಾನ

ನವೆಂಬರ್ 15, 2026

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಬೀದಿನಾಟಕ ಮತ್ತು ಫ್ಲ್ಯಾಶ್‌ಮಾಬ್ ಕಾರ್ಯಕ್ರಮ

ನವೆಂಬರ್ 15, 2026

ಬಿರುನಾಣಿಯಲ್ಲಿ ₹30 ಲಕ್ಷ ವೆಚ್ಚದ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ; ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕರ ವಿಶೇಷ ಅನುದಾನದಲ್ಲಿ ಕಾಮಗಾರಿಗೆ ಚಾಲನೆ

ನವೆಂಬರ್ 15, 2026

ನವೆಂಬರ್ 22ರಂದು ಅಜ್ಜಿಕುಟ್ಟಿರ ಕುಟುಂಬ ಹಾಕಿ ಪಂದ್ಯಾವಳಿಯ ಲಾಂಛನ ಬಿಡುಗಡೆ

ನವೆಂಬರ್ 15, 2026

ಸಾಲುಮರದ ತಿಮ್ಮಕ್ಕ ಸ್ಮರಣೆ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜೀವನಶೈಲಿಯಾಗಲಿ

ನವೆಂಬರ್ 15, 2026

ಗುಂಡುಗುಟ್ಟಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ; ಹಸಿರು ದೀಪಾವಳಿ ಆಚರಣೆ ಮೂಲಕ ಪರಿಸರ ಜಾಗೃತಿ

ನವೆಂಬರ್ 15, 2026

ರಸಪ್ರಶ್ನೆ ಸ್ಪರ್ಧೆ: ನಾಪೋಕ್ಲು ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.