ಬಿರುನಾಣಿ, NEWS DESK ನ.15: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಭಾಗದಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಳಾಂಗಣ ಕ್ರೀಡಾಂಗಣದ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಶಾಸಕರ ವಿಶೇಷ ಅನುದಾನದಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಸ್ಥಳೀಯ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಕ್ಷೇತ್ರದ ವಿವಿಧ ಭಾಗಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಎಲ್ಲ ರೀತಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶಾಸಕರು ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಈ ಪೈಕಿ ಬಿರುನಾಣಿಯಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣವೂ ಪ್ರಮುಖ ಯೋಜನೆಯಾಗಿದೆ. ಕಾಮಗಾರಿಯು ಗುಣಮಟ್ಟದಿಂದ ಹಾಗೂ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಈ ಸಂದರ್ಭದಲ್ಲಿ ಅವರು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಡಿಸಿಸಿ ಸದಸ್ಯ ಚೋಟ್ಟೆಯಂಡಮಾಡ ವಿಶು, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ವಲಯ ಅಧ್ಯಕ್ಷ ಕುಪ್ಪಣ್ಣಮಾಡ ಪ್ರೀತಮ್, ಬೂತ್ ಅಧ್ಯಕ್ಷರಾದ ಕಳಕಂಡ ಜೀತು ಕುಶಾಲಪ್ಪ, ಬೊಟ್ಟಂಗಡ ಜಗದೀಶ್, ಪಂಚಾಯಿತಿ ಮಾಜಿ ಸದಸ್ಯ ತಂಬಿ ನಾಣಯ್ಯ, ಪಕ್ಷದ ಮುಖಂಡರಾದ ಅಣ್ಣಳ್ಳಮಾಡ ಹರೀಶ್ ಪೂವಯ್ಯ, ರೋಬಿನ್ ತಿಮ್ಮಯ್ಯ, ಗಿರೀಶ್, ರಾಜ, ಕುಂಡಚ್ಚಿರ ಮಂಜು ದೇವಯ್ಯ, ಕಾಳಿಮಾಡ ರಾಶಿಕ, ಬುಟೀಯಂಡ ಗಣಪತಿ, ಸುನಿತಾ, ಗೌತಮ್, ಚಿನ್ನಪ್ಪ, ಕರ್ತಮಾಡ ಸುಜು, ನೆಲ್ಲಿರ ಸೋಮಣ್ಣ, ಬಿರುನಾಣಿ ಯುವ ಕಾಂಗ್ರೆಸ್ ಅಧ್ಯಕ್ಷ ಅಣ್ಣಳ್ಳಮಾಡ ಅಮನ್ ತಮ್ಮಯ್ಯ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
















