Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜನವಿರೋಧಿ ಆಡಳಿತದ ವಿರುದ್ಧ ನ.20 ಮತ್ತು 23 ರಂದು ಕೊಡಗು ಬಿಜೆಪಿಯಿಂದ ಪ್ರತಿಭಟನಾ ಜಾಥಾ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜನವಿರೋಧಿ ಆಡಳಿತದ ವಿರುದ್ಧ ನ.20 ಮತ್ತು 23 ರಂದು ಕೊಡಗು ಬಿಜೆಪಿಯಿಂದ ಪ್ರತಿಭಟನಾ ಜಾಥಾ

ನವೆಂಬರ್ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.16 : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ಆಡಳಿತದ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನ.20 ರಂದು ವಿರಾಜಪೇಟೆಯಿಂದ ಮಡಿಕೇರಿಗೆ ಮತ್ತು ನ.23 ರಂದು ಬೆಟ್ಟದಳ್ಳಿಯಿಂದ ಸೋಮವಾರಪೇಟೆಯವರೆಗೆ ಪ್ರತಿಭಟನಾ ಜಾಥಾ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಮಡಿಕೇರಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಭ್ರಷ್ಟಾಚಾರ ಮಿತಿ ಮೀರಿದೆ, ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ನಡೆಯುತ್ತಿಲ್ಲ. ಕೊಡಗು ಜಿಲ್ಲೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಆರೋಪಿಸಿದರು.
ಹಾಲಿನ ದರ ಏರಿಕೆಯ ಹೊರೆಯನ್ನು ಗ್ರಾಹಕರ ಮೇಲೆ ಹಾಕಲಾಗಿದೆ. ಶೇ.30ರಿಂದ 40ರಷ್ಟು ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರ ಪ್ರಯಾಣಕ್ಕೆ ತೀವ್ರ ತೊಂದರೆಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಳೆದ ಮೂರು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ ಎಂದು ದೂರಿದರು. ಸಿ ಮತ್ತು ಡಿ ಭೂಮಿ ಸಮಸ್ಯೆ, ವನ್ಯಜೀವಿಗಳ ದಾಳಿ ಸೇರಿದಂತೆ ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುತ್ತಿಲ್ಲ. ಸರಕಾರದ ಜನವಿರೋಧಿ ನೀತಿ ಮತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ತೋರುತ್ತಿರುವ ನಿರ್ಲಕ್ಷö್ಯದ ವಿರುದ್ಧ ನ.20ರಂದು ವಿರಾಜಪೇಟೆಯಿಂದ ಮಡಿಕೇರಿವರೆಗೆ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದೆ. ಮಾರ್ಗಮಧ್ಯೆ ವಿವಿಧೆಡೆ ಜನಜಾಗೃತಿ ಸಭೆಗಳನ್ನು ನಡೆಸಿ ಜಾಥಾ ಮುಂದುವರಿಯಲಿದೆ. ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಸಭೆ ನಡೆಸಿದ ಬಳಿಕ ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಜನಪ್ರತಿನಿಧಿಗಳು ಕೇವಲ ಪ್ರಚಾರಕ್ಕಾಗಿ ಕೆಲಸ ಮಾಡುವುದಲ್ಲ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟುಕೊಡಲಿ ಎಂದು ಆಗ್ರಹಿಸಿದರು.
*ಕಚೇರಿಗೆ ಹೋದವರಿಗೆ ಶಾಲು* ಶಾಸಕರ ಕಚೇರಿಗೆ ಭೇಟಿ ನೀಡುವವರಿಗೆ ಕಾಂಗ್ರೆಸ್ ಶಾಲು ಹಾಕಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿಯವರು ಕಾಂಗ್ರೆಸ್ ಗೆ ಸೇರಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ರವಿ ಕಾಳಪ್ಪ ಸವಾಲು ಹಾಕಿದರು.
*ಶ್ವೇತಪತ್ರ ಹೊರಡಿಸಿ* ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಕೊಡಗು ಜಿಲ್ಲೆಯ ರಸ್ತೆಗಳ ಸ್ಥಿತಿ ಅತ್ಯಂತ ಹೀನಾಯವಾಗಿದೆ. ಗ್ರಾಮೀಣ ಭಾಗದ ರಸ್ತೆಗಳು ಅಧೋಗತಿಗೆ ತಲುಪಿವೆ. ಜಿಲ್ಲೆಯ ಇಬ್ಬರು ಶಾಸಕರು ರಸ್ತೆಗಳ ಅಭಿವೃದ್ಧಿ ಸೇರಿದಂತೆ ಕೈಗೊಂಡಿರುವ ವಿವಿಧ ಕಾಮಗಾರಿಗಳ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ತೆರಿಗೆ ಹೆಚ್ಚಳದ ಮೂಲಕ ಸರಕಾರ ಜನಸಾಮಾನ್ಯರ ರಕ್ತ ಹೀರುತ್ತಿದೆ. ಹೊಸ ವಾಹನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲಾಗುತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಮಡಿಕೇರಿಯಲ್ಲಿ 700 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈಗ ಆಸ್ಪತ್ರೆಯಲ್ಲಿ ಔಷಧಿಗಳೂ ಸಮರ್ಪಕವಾಗಿ ಲಭ್ಯವಿಲ್ಲದೆ ರೋಗಿಗಳು ಹೊರಗಿನಿಂದ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಔಷಧಿ ಖರೀದಿಗೂ ಹಣವಿಲ್ಲದಂತಾಗಿದೆ ಎಂದು ಆರೋಪಿಸಿದ ಅವರು ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿಯಿಲ್ಲದಿದ್ದರೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಅತ್ತೂರು-ಯಡವನಾಡು ಪುನರ್ವಸತಿ ಪ್ರದೇಶವನ್ನು ಇದೀಗ ಅರಣ್ಯ ಪ್ರದೇಶವೆಂದು ಸರಕಾರ ಪರಿಗಣಿಸಿದೆ. ಸುಮಾರು 25 ಸಾವಿರ ಎಕರೆ ಕೃಷಿ ಭೂಮಿಯನ್ನು ಅರಣ್ಯವೆಂದು ಘೋಷಿಸಲು ಸರಕಾರ ಮುಂದಾಗಿದ್ದು, ಕೃಷಿಕರಲ್ಲಿ ಆತಂಕ ಎದುರಾಗಿದೆ. ಅರಣ್ಯ ಇಲಾಖೆಯಿಂದ ರೈತರಿಗೆ ಕಿರುಕುಳವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನ.23ರಂದು ಬೆಟ್ಟದಳ್ಳಿಯಿಂದ ಸೋಮವಾರಪೇಟೆಯವರೆಗೆ ಪ್ರತಿಭಟನಾ ಜಾಥಾ ನಡೆಯಲಿದ್ದು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ರೈತಾಪಿ ವರ್ಗಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವರು ತಿಳಿಸಿದರು.
*ಸರಕಾರ ದಿವಾಳಿಯಾಗಿದೆ* ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮಾತನಾಡಿ, ಜನವಿರೋಧಿ ರಾಜ್ಯ ಸರಕಾರ ದಿವಾಳಿಯಾಗಿದೆ, ಜನಸಾಮಾನ್ಯರನ್ನು ಹಾಗೂ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸರಕಾರದ ರೈತ ವಿರೋಧಿ ಧೋರಣೆಯಿಂದ ಕೊಡಗಿನಲ್ಲಿ ಸಿ ಮತ್ತು ಡಿ ಭೂಮಿ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಜನಪರ ಕಾಳಜಿಯಿಲ್ಲದ ಆಡಳಿತದಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
*ವಿಶೇಷ ಪ್ಯಾಕೇಜ್ ನೀಡಿ* ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ಮುಖ್ಯಮಂತ್ರಿಗಳು ವಿಶೇಷ ಅನುದಾನದ ಆಮಿಷವೊಡ್ಡಿ ಇತರ ಪಕ್ಷಗಳ ಶಾಸಕರನ್ನು ಕಾಂಗ್ರೆಸ್ ಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಸರಕಾರವನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇಡೀ ರಾಜ್ಯಕ್ಕೆ ಕಾವೇರಿ ನೀರನ್ನು ಒದಗಿಸುವ ಕಾವೇರಿ ನಾಡು ಕೊಡಗು ಜಿಲ್ಲೆಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಮನು ಮುತ್ತಪ್ಪ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗಾಳಿಬೀಡು ರಸ್ತೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಲು ಶಾಸಕ ಡಾ. ಮಂತರ್ ಗೌಡ ಖಡಕ್ ಸೂಚನೆ; ವಿಳಂಬ ಮುಂದುವರಿದರೆ ಗುತ್ತಿಗೆದಾರರಿಗೆ ಕಪ್ಪುಪಟ್ಟಿ, ಅಧಿಕಾರಿಗಳ ಅಮಾನತಿಗೆ ಎಚ್ಚರಿಕೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.16: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿ ಜಿಲ್ಲಾಸ್ಪತ್ರೆ…

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 2026

ಕೊಡವ ಮುಸ್ಲಿಂ ಅಸೋಸಿಯೇಷನ್‌ನಿಂದ ಕೆ.ಎಂ.ಎ. ವಿಶೇಷ ಶೈಕ್ಷಣಿಕ ಪುರಸ್ಕಾರ ವಿತರಣೆ; ಏಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 16, 2026

ಕರಾಟೆ ಸ್ಪರ್ಧೆಯಲ್ಲಿ ಅದ್ವೈತ್‌ಗೆ ದ್ವಿತೀಯ ಸ್ಥಾನ

ನವೆಂಬರ್ 16, 2026

 ಧಾರ್ಮಿಕ ಸ್ವಾತಂತ್ರ್ಯ, ಗೋಸಂರಕ್ಷಣಾ ಕಾಯ್ದೆ ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ವಿರೋಧ

ನವೆಂಬರ್ 16, 2026

ಕಾವೇರಿ ಶಾಲೆಯ ಮಕ್ಕಳ ದಿನಾಚರಣೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ; ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ಸ್ಮರಣಿಕೆ ವಿತರಣೆ

ನವೆಂಬರ್ 16, 2026

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 16, 2026

ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ನವೆಂಬರ್ 16, 2026

ಕೊಡವಲ್ಯಾಂಡ್ ಸ್ವಾಯತ್ತತೆ ಕೊಡವರ ನ್ಯಾಯಸಮ್ಮತ ಹಕ್ಕು: ಎನ್.ಯು. ನಾಚಪ್ಪ; ಟಿ. ಶೆಟ್ಟಿಗೇರಿಯಲ್ಲಿ ಸಿಎನ್‌ಸಿಯ 10ನೇ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.