ಸೋಮವಾರಪೇಟೆ, NEWS DESK ನ.16: ತಾಲೂಕಿನ ಬೇಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಶಾಲಾ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಪಾಲ್ಗೊಂಡರು.
ನಂತರ ಮಾತನಾಡಿದ ಅವರು, ಇಂದಿನ ಮಕ್ಕಳು ಭವಿಷ್ಯದ ರೂವಾರಿಗಳಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಆತ್ಮವಿಶ್ವಾಸ ಹಾಗೂ ಸಾಧಿಸುವ ಛಲವನ್ನು ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.
















