Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ನ.16: ಶಾಲಾ ಬಿಸಿಯೂಟ ಯೋಜನೆಗೆ ಸೆಂಟ್ರಲ್ ಕ್ಲಸ್ಟರ್ ಕಿಚನ್ ರಚಿಸುವ ಶಿಕ್ಷಣ ಇಲಾಖೆಯ ಪ್ರಸ್ತಾವನೆಯನ್ನು ಕೈಬಿಡಬೇಕು ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಈಗಿರುವ ಅಡುಗೆ ಸಿಬ್ಬಂದಿಗೆ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಬಿಸಿಯೂಟ ನೌಕರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಳೆದ ಮೂರ್ನಾಲ್ಕು ತಿಂಗಳಿಂದ ವೇತನ ಪಾವತಿಯಾಗಿರಲಿಲ್ಲ. ಇತ್ತೀಚೆಗೆ ವೇತನ ಬಿಡುಗಡೆ ಮಾಡಿದ್ದರೂ, ಅದರಲ್ಲಿ ಸಾವಿರಾರು ರೂಪಾಯಿಗಳನ್ನು ಅನಗತ್ಯವಾಗಿ ಕಡಿತಗೊಳಿಸಿ ಖಾತೆಗೆ ಜಮೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕುಸುಮಾ, ಪೊನ್ನಂಪೇಟೆ ತಾಲೂಕು ಅಧ್ಯಕ್ಷೆ ಶ್ವೇತಾ ಹಾಗೂ ವಿರಾಜಪೇಟೆ ತಾಲೂಕು ಅಧ್ಯಕ್ಷೆ ಉಮೇಶ್ವರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಹಾಗೂ ಪೊನ್ನಂಪೇಟೆ ತಾಲೂಕು ಅಕ್ಷರ ದಾಸೋಹ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಸಾಬು, ರಾಜ್ಯದಾದ್ಯಂತ ಬಿಸಿಯೂಟ ನೌಕರರು ಅತ್ಯಂತ ಕಡಿಮೆ ಗೌರವಧನದಲ್ಲಿ ದುಡಿಯುತ್ತಿದ್ದರೂ ಸರ್ಕಾರ ಸಕಾಲಕ್ಕೆ ವೇತನ ನೀಡದೆ ಸತಾಯಿಸುತ್ತಿದೆ. ಮೂರ್ನಾಲ್ಕು ತಿಂಗಳ ಬಾಕಿ ವೇತನವನ್ನು ಒಟ್ಟಿಗೆ ಬಿಡುಗಡೆ ಮಾಡುವಾಗಲೂ ಕಡಿತಗೊಳಿಸಿರುವುದು ನೌಕರರ ಬದುಕಿನ ಜೊತೆ ಚೆಲ್ಲಾಟವಾಡಿದಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ನಿರ್ವಹಣೆ ಕಷ್ಟವಾಗಿರುವ ಸಂದರ್ಭದಲ್ಲಿ ಸೆಂಟ್ರಲ್ ಕ್ಲಸ್ಟರ್ ಕಿಚನ್ ಹೆಸರಿನಲ್ಲಿ ನೌಕರರನ್ನು ಕೆಲಸದಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ. ಸರ್ಕಾರ ಕೂಡಲೇ ವೇತನ ಕಡಿತ ಸರಿಪಡಿಸಿ ಬಾಕಿ ಹಣ ಬಿಡುಗಡೆ ಮಾಡಬೇಕು ಹಾಗೂ ಕ್ಲಸ್ಟರ್ ಕಿಚನ್ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕುಸುಮಾ ಮಾತನಾಡಿ, 2001ರಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜಾರಿಗೆ ಬಂದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಅವರಿರುವ ಶಾಲೆಗಳಲ್ಲಿಯೇ ತಾಜಾ ಹಾಗೂ ಬಿಸಿಯಾದ ಪೌಷ್ಟಿಕ ಆಹಾರ ನೀಡಬೇಕೆಂಬ ನಿಯಮವಿದೆ. ಇದಕ್ಕಾಗಿ ಸರ್ಕಾರ ಶಾಲೆಗಳಲ್ಲಿ ಅಡುಗೆ ಕೋಣೆ ಹಾಗೂ ಅಗತ್ಯ ಪಾತ್ರೆಗಳನ್ನು ಒದಗಿಸಿದೆ. 2012ರ ಸುತ್ತೋಲೆಯ ಪ್ರಕಾರ ಬಿಸಿಯೂಟ ಯೋಜನೆಯನ್ನು ಸ್ವಯಂಸೇವಾ ಸಂಸ್ಥೆಗಳಿಗೆ ವಹಿಸುವುದನ್ನು ನಿಷೇಧಿಸಲಾಗಿದೆ. ಆದರೂ ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿ ನವೆಂಬರ್ 7ರಂದು ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಕ್ಲಸ್ಟರ್ ಕಿಚನ್ ರಚನೆ ಕುರಿತು ಅಭಿಪ್ರಾಯ ಕೋರಿ ಜಿಲ್ಲೆಗಳ ಉಪನಿರ್ದೇಶಕರಿಗೆ ಪತ್ರ ಬರೆದಿರುವುದು ಖಂಡನೀಯ. ಈ ಪ್ರಸ್ತಾವನೆಯು ಮುಂದೆ ಖಾಸಗಿ ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳಿಗೆ ಯೋಜನೆಯನ್ನು ವಹಿಸುವ ಉದ್ದೇಶ ಹೊಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪೊನ್ನಂಪೇಟೆ ತಾಲೂಕು ಅಧ್ಯಕ್ಷೆ ಶ್ವೇತಾ ಮಾತನಾಡಿ, ಬಿಸಿಯೂಟದ ಜವಾಬ್ದಾರಿಯನ್ನು ಅನುಭವಿ ಅಡುಗೆ ಸಿಬ್ಬಂದಿಗೆ ವಹಿಸಬೇಕು. ಮುಖ್ಯಶಿಕ್ಷಕರಿಗೆ ಈ ಜವಾಬ್ದಾರಿ ನೀಡುವುದು ಬೇಡವಾದರೆ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಮುಖ್ಯ ಅಡುಗೆಯವರ ಜಂಟಿ ಖಾತೆ ತೆರೆಯುವ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿ ಬಿಸಿಯೂಟ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಶಿಕ್ಷಕರು ಎದುರಿಸುತ್ತಿರುವ ಮೊಟ್ಟೆ ಬೆಲೆ ಏರಿಕೆ ಸಮಸ್ಯೆ ಪರಿಹರಿಸಲು ಕುಕ್ಕುಟ ಮಹಾಮಂಡಳಿಯಿಂದಲೇ ಶಾಲೆಗಳಿಗೆ ಮೊಟ್ಟೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿರಾಜಪೇಟೆ ತಾಲೂಕು ಅಧ್ಯಕ್ಷೆ ಉಮೇಶ್ವರಿ ಸೇರಿದಂತೆ ಅಕ್ಷರ ದಾಸೋಹ ನೌಕರರು, ಶಾಜಿ ರಮೇಶ್, ಸಾದಿಕ್ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗಾಳಿಬೀಡು ರಸ್ತೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಲು ಶಾಸಕ ಡಾ. ಮಂತರ್ ಗೌಡ ಖಡಕ್ ಸೂಚನೆ; ವಿಳಂಬ ಮುಂದುವರಿದರೆ ಗುತ್ತಿಗೆದಾರರಿಗೆ ಕಪ್ಪುಪಟ್ಟಿ, ಅಧಿಕಾರಿಗಳ ಅಮಾನತಿಗೆ ಎಚ್ಚರಿಕೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.16: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿ ಜಿಲ್ಲಾಸ್ಪತ್ರೆ…

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 2026

ಕೊಡವ ಮುಸ್ಲಿಂ ಅಸೋಸಿಯೇಷನ್‌ನಿಂದ ಕೆ.ಎಂ.ಎ. ವಿಶೇಷ ಶೈಕ್ಷಣಿಕ ಪುರಸ್ಕಾರ ವಿತರಣೆ; ಏಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 16, 2026

ಕರಾಟೆ ಸ್ಪರ್ಧೆಯಲ್ಲಿ ಅದ್ವೈತ್‌ಗೆ ದ್ವಿತೀಯ ಸ್ಥಾನ

ನವೆಂಬರ್ 16, 2026

 ಧಾರ್ಮಿಕ ಸ್ವಾತಂತ್ರ್ಯ, ಗೋಸಂರಕ್ಷಣಾ ಕಾಯ್ದೆ ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ವಿರೋಧ

ನವೆಂಬರ್ 16, 2026

ಕಾವೇರಿ ಶಾಲೆಯ ಮಕ್ಕಳ ದಿನಾಚರಣೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ; ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ಸ್ಮರಣಿಕೆ ವಿತರಣೆ

ನವೆಂಬರ್ 16, 2026

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 16, 2026

ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ನವೆಂಬರ್ 16, 2026

ಕೊಡವಲ್ಯಾಂಡ್ ಸ್ವಾಯತ್ತತೆ ಕೊಡವರ ನ್ಯಾಯಸಮ್ಮತ ಹಕ್ಕು: ಎನ್.ಯು. ನಾಚಪ್ಪ; ಟಿ. ಶೆಟ್ಟಿಗೇರಿಯಲ್ಲಿ ಸಿಎನ್‌ಸಿಯ 10ನೇ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.