ಸುಂಟಿಕೊಪ್ಪ, NEWS DESK ನ.17: ಕಂಬಿಬಾಣೆ ನಿವಾಸಿ ಹಾಗೂ ಹಿರಿಯ ಸಹಕಾರಿ ಕುಂಜಿಲನ ಎಸ್. ಮಂಜುನಾಥ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಹಕಾರ ವಿಭಾಗದ ರಾಜ್ಯಾಧ್ಯಕ್ಷ ಧನರಾಜ್ ಎಸ್. ತಾಳ್ಳಂಪಳ್ಳಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆಯೊಂದಿಗೆ ನೇಮಕಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ನೂತನ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ.
















