ಮಡಿಕೇರಿ, NEWS DESK ನ.18: ಕುಶಾಲನಗರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಬಾಲಕರ ಬ್ರಾಸ್ ಬ್ಯಾಂಡ್ ಸ್ಪರ್ಧೆಯಲ್ಲಿ ಕೊಡಗು ವಿದ್ಯಾಲಯದ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದೆ.
ಸ್ಪರ್ಧೆಯಲ್ಲಿ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು. ತಂಡದ ಶಿಸ್ತು, ಏಕಾಗ್ರತೆ, ಸಮನ್ವಯ ಹಾಗೂ ಸಂಗೀತ ಪ್ರದರ್ಶನ ಗಮನ ಸೆಳೆಯಿತು.
ಪ್ರಥಮ ಸ್ಥಾನ ಗಳಿಸಿರುವ ಕೊಡಗು ವಿದ್ಯಾಲಯದ ತಂಡವು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಅಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಲಿದೆ.
ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಸ್ತು ಹಾಗೂ ತರಬೇತಿಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ತಂಡ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸುವ ವಿಶ್ವಾಸವಿದೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
















