ಮಡಿಕೇರಿ, NEWS DESK ನ.18: ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 21ರಿಂದ 23ರವರೆಗೆ ನಗರದ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ನವೆಂಬರ್ 21ರಂದು ಬೆಳಿಗ್ಗೆ 9 ಗಂಟೆಗೆ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ನವೆಂಬರ್ 23ರಂದು ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರಂಭಕ್ಕೆ ಮೈಸೂರಿನ ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಬೋರಲಿಂಗಯ್ಯ ಎಂ.ಬಿ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕ್ರೀಡಾಕೂಟದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.















