ಮಡಿಕೇರಿ, NEWS DESK ನ.18: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನವೆಂಬರ್ 29ರಂದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಅರೆಭಾಷೆ ಸಾಹಿತ್ಯ ಸಮ್ಮೇಳನ-2026’ ಆಯೋಜಿಸಲು ಉದ್ದೇಶಿಸಲಾಗಿದೆ.
ಈ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅರೆಭಾಷೆಯ ಲೇಖನ, ಪ್ರಬಂಧ, ಕಥೆ, ಕವನ, ಚುಟುಕು, ಗಾದೆಮಾತುಗಳು, ಒಗಟು ಸೇರಿದಂತೆ ವಿವಿಧ ಬಗೆಯ ಅರೆಭಾಷೆ ಬರಹಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಲೇಖಕರು ತಮ್ಮ ಬರಹಗಳನ್ನು ನವೆಂಬರ್ 25ರೊಳಗೆ ಅಕಾಡೆಮಿ ಕಚೇರಿಗೆ ತಲುಪಿಸುವಂತೆ ಕೋರಲಾಗಿದೆ.
ಬರಹಗಳನ್ನು ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿಕೃಪ ಕಟ್ಟಡ, ಮೊದಲನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ.
ಇಮೇಲ್: arebaseacademy@gmail.com
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 6362522677 ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.















