ಮಡಿಕೇರಿ, NEWS DESK ನ.18: ಕುಶಾಲನಗರ ತಾಲ್ಲೂಕಿನ ಕುಶಾಲನಗರ ಹೋಬಳಿಯ ಪ್ರಜಾಸೇವಾ ಅಭಿಯಾನವು ನವೆಂಬರ್ 21ರಂದು ಬೆಳಗ್ಗೆ 10.30 ಗಂಟೆಗೆ ಕೂಡಿಗೆ ಗ್ರಾಮದ ಡಯಟ್ ಮೈದಾನದಲ್ಲಿ ನಡೆಯಲಿದೆ.
ಶಾಸಕರಾದ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ರಮೇಶ್ ಬಾಬು ಅವರು ತಿಳಿಸಿದ್ದಾರೆ.















