ಮಡಿಕೇರಿ, NEWS DESK ನ.18: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2026ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ ಹಾಗೂ ಅಧ್ಯಯನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸಲು ತಲಾ ಒಬ್ಬರಂತೆ ಒಟ್ಟು ಮೂವರು ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ಸಾಧಕರು ಸ್ವತಃ ಅರ್ಜಿ ಸಲ್ಲಿಸಬಹುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸಿನೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಸಾಧಕರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಳ ಸಂಪೂರ್ಣ ಮಾಹಿತಿಯನ್ನು ಒದಗಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಅರ್ಜಿಯ ಲಕೋಟೆಯ ಮೇಲೆ “ಗೌರವ ಪ್ರಶಸ್ತಿ 2026” ಎಂದು ನಮೂದಿಸಿ, ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ–571201 ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 6362522677 ಸಂಪರ್ಕಿಸಬಹುದು. ಈ ಹಿಂದೆ ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದವರೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.















