ಮಡಿಕೇರಿ NEWS DESK ನ.19 : ನಾಳೆ (ನ.20) ನಡೆಯಬೇಕಾಗಿದ್ದ ಕೊಡಗು ಜಿಲ್ಲಾ ಬಿಜೆಪಿಯ ಜನಜಾಗೃತಿ ಜಾಥಾ ಹಾಗೂ ಪ್ರತಿಭಟನಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಡಗು ಜಿಲ್ಲೆಯ ಸರಸಂಘಚಾಲಕರಾದ ಚೆಕ್ಕೆರ ಮನು ಕಾವೇರಪ್ಪ ಅವರು ಇಂದು ನಿಧನರಾಗಿರುವ ಹಿನ್ನೆಲೆಯಲ್ಲಿ ಗೌರವ ಸೂಚಕವಾಗಿ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ತಿಳಿಸಿದೆ.
















