Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಐಟಿಯುಸಿಯ 43ನೇ ರಾಷ್ಟ್ರೀಯ ಸಮ್ಮೇಳನ: ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ; ನ.22ರಿಂದ ಬೆಂಗಳೂರಿನಲ್ಲಿ ಸಮ್ಮೇಳನ ಆರಂಭ; ಕೊಡಗಿನಿಂದ 500 ಸದಸ್ಯರು ಭಾಗಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಐಟಿಯುಸಿಯ 43ನೇ ರಾಷ್ಟ್ರೀಯ ಸಮ್ಮೇಳನ: ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ; ನ.22ರಿಂದ ಬೆಂಗಳೂರಿನಲ್ಲಿ ಸಮ್ಮೇಳನ ಆರಂಭ; ಕೊಡಗಿನಿಂದ 500 ಸದಸ್ಯರು ಭಾಗಿ

ನವೆಂಬರ್ 19, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.19: ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ವತಿಯಿಂದ 43ನೇ ರಾಷ್ಟ್ರೀಯ ಸಮ್ಮೇಳನವು ನವೆಂಬರ್ 22ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ದೇಶದ ಕಾರ್ಮಿಕ ವರ್ಗದ ಹಕ್ಕುಗಳು ಹಾಗೂ ಬೇಡಿಕೆಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ಸುಮಾರು 500 ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಎಐಟಿಯುಸಿ ಕೊಡಗು ಜಿಲ್ಲಾಧ್ಯಕ್ಷ ಕೆ.ವಿ. ಸುನಿಲ್ ತಿಳಿಸಿದರು.

ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಅತ್ಯಂತ ಹಳೆಯ ರಾಷ್ಟ್ರೀಯ ಕಾರ್ಮಿಕ ಸಂಘಟನೆಯಾದ ಎಐಟಿಯುಸಿಯ ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉತ್ಪಾದನಾ ವಲಯ, ವಿದ್ಯುತ್, ಗಣಿಗಾರಿಕೆ, ಕಲ್ಲಿದ್ದಲು, ರಕ್ಷಣಾ ವಲಯ, ಬ್ಯಾಂಕಿಂಗ್, ವಿಮೆ, ತೋಟಗಾರಿಕೆ ಹಾಗೂ ನಿರ್ಮಾಣ ಕ್ಷೇತ್ರಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಸೈಪ್ರಸ್, ಪೋರ್ಚುಗಲ್, ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ, ಪ್ಯಾಲೆಸ್ತೀನ್, ಇರಾನ್ ಹಾಗೂ ಬಹರೇನ್ ಸೇರಿದಂತೆ 15ಕ್ಕೂ ಹೆಚ್ಚು ದೇಶಗಳ 50ಕ್ಕೂ ಅಧಿಕ ಅಂತಾರಾಷ್ಟ್ರೀಯ ಕಾರ್ಮಿಕ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಮಿಕರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕಾರ್ಮಿಕರಿಗೆ ಸೂಕ್ತ ವೇತನ ದೊರೆಯುತ್ತಿಲ್ಲ. ನಿರುದ್ಯೋಗ, ಖಾಸಗೀಕರಣ, ಆರೋಗ್ಯ ಮತ್ತು ಶಿಕ್ಷಣ ಸೇವೆಗಳ ವ್ಯಾಪಾರೀಕರಣ ಸೇರಿದಂತೆ ಹಲವು ಸಮಸ್ಯೆಗಳು ಕಾರ್ಮಿಕ ವರ್ಗವನ್ನು ಕಾಡುತ್ತಿವೆ. ಈ ಹಿನ್ನೆಲೆಯಲ್ಲಿ ವೈಜ್ಞಾನಿಕ ಹಾಗೂ ಅಗತ್ಯಾಧಾರಿತ ಕನಿಷ್ಠ ವೇತನ ಜಾರಿಗೊಳಿಸುವುದು, ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಮತ್ತು ಗಿಗ್ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು ಸಮ್ಮೇಳನದ ಪ್ರಮುಖ ಉದ್ದೇಶಗಳಾಗಿವೆ ಎಂದು ಹೇಳಿದರು.

ದೇಶದ ಶೇ.90ಕ್ಕೂ ಹೆಚ್ಚು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಆರೋಗ್ಯ ಸೇವೆ, ಪಿಂಚಣಿ ಹಾಗೂ ಭವಿಷ್ಯ ನಿಧಿಯಂತಹ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಕಾರ್ಮಿಕ ಸಂಹಿತೆಗಳಿಂದ ಕಾರ್ಮಿಕರ ಹಿತಾಸಕ್ತಿಗೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

ಕೊಡಗಿನ ಜ್ವಲಂತ ಸಮಸ್ಯೆಗಳಿಗೂ ಆದ್ಯತೆ

ಎಐಟಿಯುಸಿ ಗೌರವಾಧ್ಯಕ್ಷ ಹೆಚ್.ಎಂ. ಸೋಮಪ್ಪ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಾರ್ಮಿಕರು, ಕೃಷಿಕರು, ಆದಿವಾಸಿಗಳು, ತೋಟ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ದುಡಿಯುವ ವರ್ಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ವಿಶೇಷವಾಗಿ ಕಾಡಾನೆ, ಹುಲಿ, ಚಿರತೆ ಸೇರಿದಂತೆ ವನ್ಯಜೀವಿಗಳ ಹಾವಳಿಯಿಂದ ಜೀವಹಾನಿ, ಬೆಳೆ ನಾಶ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿದ್ದು, ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ ಎಂದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ವನ್ಯಜೀವಿಗಳ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ನೆರವು ಹಾಗೂ ಬೆಳೆ ಮತ್ತು ಆಸ್ತಿ ನಷ್ಟ ಅನುಭವಿಸಿದವರಿಗೆ ತ್ವರಿತ ಪರಿಹಾರ ನೀಡಬೇಕು. ಕಾಡಂಚಿನ ಗ್ರಾಮಗಳ ಜನರ ಸುರಕ್ಷತೆಗೆ ವಿಶೇಷ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಭೂಮಿ ಸಮಸ್ಯೆಯೂ ಗಂಭೀರವಾಗಿದ್ದು, ಭೂಮಿಯ ಹಕ್ಕು, ಸಾಗುವಳಿ ಜಮೀನುಗಳ ಸಕ್ರಮೀಕರಣ, ಭೂ ದಾಖಲೆಗಳ ಗೊಂದಲ ಹಾಗೂ ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಹಲವು ಕುಟುಂಬಗಳು ಆತಂಕದಲ್ಲಿವೆ. ತಲೆತಲಾಂತರಗಳಿಂದ ಭೂಮಿಯನ್ನು ಅವಲಂಬಿಸಿ ಬದುಕುತ್ತಿರುವವರಿಗೆ ಕಾನೂನುಬದ್ಧ ಹಕ್ಕು ಮತ್ತು ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ಕಾಫಿ ತೋಟಗಳು, ನಿರ್ಮಾಣ ಕ್ಷೇತ್ರ, ಹೋಂಸ್ಟೇ ಹಾಗೂ ಇತರ ಅಸಂಘಟಿತ ಉದ್ಯೋಗ ಕ್ಷೇತ್ರಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಠ ವೇತನ, ಉದ್ಯೋಗ ಭದ್ರತೆ, ಆರೋಗ್ಯ ಸೌಲಭ್ಯ, ವಸತಿ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಮಹಿಳಾ ಮತ್ತು ವಲಸೆ ಕಾರ್ಮಿಕರ ಸಮಸ್ಯೆಗಳಿಗೂ ವಿಶೇಷ ಆದ್ಯತೆ ನೀಡಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಸುಮಾರು 8 ಸಾವಿರ ಬಡವರು ಹಾಗೂ ತೋಟ ಕಾರ್ಮಿಕರು ನಿವೇಶನ ರಹಿತರಾಗಿದ್ದಾರೆ. ಇವರ ಸಮೀಕ್ಷೆ ನಡೆಸಿ ಶೀಘ್ರ ನಿವೇಶನ ಮತ್ತು ವಸತಿ ಕಲ್ಪಿಸಬೇಕು. ಕಳೆದ 15 ವರ್ಷಗಳಿಂದ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಜಿಲ್ಲಾಧಿಕಾರಿಗಳು, ಶಾಸಕರು ಹಾಗೂ ಸರ್ಕಾರಕ್ಕೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬರಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂದಿನಿಂದಲೂ ಅರ್ಜಿ ಸಲ್ಲಿಸಿರುವ ಅರ್ಹರಿಗೆ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಮತ್ತು ವಸತಿ ಒದಗಿಸಬೇಕೆಂಬ ಹಕ್ಕೊತ್ತಾಯವನ್ನು ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ ಪಕ್ಷಗಳಿಂದ ಮೋಸ ಆರೋಪ

ಚುನಾವಣೆ ಸಂದರ್ಭದಲ್ಲಿ ದುಡಿಯುವ ವರ್ಗಕ್ಕೆ ಸುಳ್ಳು ಭರವಸೆಗಳನ್ನು ನೀಡಿ ಮತಗಳನ್ನು ಪಡೆಯುವ ರಾಜಕಾರಣಿಗಳು ಅಧಿಕಾರಕ್ಕೆ ಬಂದ ಬಳಿಕ ಬಡವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಹೆಚ್.ಎಂ. ಸೋಮಪ್ಪ ಆರೋಪಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು ಹಾಗೂ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜಕಾರಣಿಗಳು ಬಡವರ ಬದುಕಿನ ಸಮಸ್ಯೆಗಳ ಬಗ್ಗೆ ಚರ್ಚಿಸುವ ಬದಲು ಅಧಿಕಾರಕ್ಕಾಗಿ ಕಾದಾಡುತ್ತಿದ್ದಾರೆ. ಕೊಡಗಿನ ಇಬ್ಬರು ಶಾಸಕರು ದುಡಿಯುವ ವರ್ಗದ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೋರಾಟದ ರೂಪುರೇಷೆ

ಬೆಂಗಳೂರಿನಲ್ಲಿ ನಡೆಯಲಿರುವ ಎಐಟಿಯುಸಿ ರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳು, ವಿವಿಧ ರಾಜ್ಯಗಳ ಪ್ರಾದೇಶಿಕ ಸಮಸ್ಯೆಗಳು ಹಾಗೂ ಕಾರ್ಮಿಕರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚಿಸಿ ನಿರ್ಣಯಗಳನ್ನು ಅಂಗೀಕರಿಸಲಾಗುವುದು. ಇದರ ಆಧಾರದ ಮೇಲೆ ಮುಂದಿನ ಹಂತದ ಹೋರಾಟ ಮತ್ತು ಕಾರ್ಯಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಕೊಡಗಿನ ವನ್ಯಜೀವಿ ಹಾವಳಿ, ಭೂಮಿಯ ಹಕ್ಕಿನ ಸಮಸ್ಯೆ, ಕಾರ್ಮಿಕರ ಶೋಷಣೆ ಹಾಗೂ ಅಸಂಘಟಿತ ವಲಯದ ಕಾರ್ಮಿಕರ ಸಂಕಷ್ಟಗಳ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ಅಗತ್ಯವಿದೆ. ದುಡಿಯುವ ವರ್ಗದ ಹಕ್ಕುಗಳ ರಕ್ಷಣೆ ಹಾಗೂ ಜನಸಾಮಾನ್ಯರ ಜೀವನಮಟ್ಟ ಸುಧಾರಣೆಗೆ ಸಂಘಟಿತ ಹೋರಾಟ ಅನಿವಾರ್ಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಕಾರ್ಯದರ್ಶಿ ಸೀತಾರಾಮ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.