Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.20: ಕೊಡಗು ಜಿಲ್ಲೆಯಲ್ಲಿ ಸಮಾಜಸೇವೆ ಹಾಗೂ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಶ್ರಮಿಸುವ ಮೂಲಕ ಜನಪರ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಹರಪಳ್ಳಿ ರವೀಂದ್ರ ಅವರ ಕುರಿತಾದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ ಸಮಾರಂಭ ಹಾಗೂ ಬೃಹತ್ ರೈತ ಸಮಾವೇಶ ನ.22ರಂದು ಸೋಮವಾರಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಕೊಡಗು ಚಾನಲ್‌ನ ಪ್ರಧಾನ ಸಂಪಾದಕ ಜಿ.ವಿ.ರವಿಕುಮಾರ್ ತಿಳಿಸಿದ್ದಾರೆ.

ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಪಳ್ಳಿ ರವೀಂದ್ರ ಅಭಿಮಾನಿಗಳ ಬಳಗ ಹಾಗೂ ಕೊಡಗು ಚಾನಲ್‌ನ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಹರಪಳ್ಳಿ ರವೀಂದ್ರ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಜನರೊಂದಿಗೆ ನಿಕಟ ಸಂಬಂಧ ಬೆಳೆಸಿಕೊಂಡಿದ್ದು, ಸಮಾಜದ ಸಂಕಷ್ಟಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಅಸಹಾಯಕರಿಗೆ ನೆರವು ನೀಡುವುದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸಹಾಯ ಮಾಡುವುದು ಹಾಗೂ ಸಾರ್ವಜನಿಕ ಹಿತಕ್ಕಾಗಿ ಶ್ರಮಿಸುವುದು ಅವರ ಸೇವಾ ಮನೋಭಾವದ ಪ್ರಮುಖ ಲಕ್ಷಣಗಳಾಗಿವೆ.

ವಿಶೇಷವಾಗಿ ರೈತರ ಬದುಕು, ಕೃಷಿ ಕ್ಷೇತ್ರದ ಸಮಸ್ಯೆಗಳು, ಗ್ರಾಮೀಣ ಜನರ ಹಿತಾಸಕ್ತಿ ಹಾಗೂ ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಲ್ಲಿ ಅವರು ಹೆಚ್ಚಿನ ಕಾಳಜಿ ಹೊಂದಿದ್ದಾರೆ. ರೈತರ ಸಮಸ್ಯೆಗಳಿಗೆ ಧ್ವನಿಯಾಗುವುದು, ಕೃಷಿಕರ ಬದುಕಿಗೆ ಬೆಂಬಲ ನೀಡುವುದು ಹಾಗೂ ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಜನಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದ್ದು, ಈ ಉದ್ದೇಶದಿಂದ ಅವರ ಕುರಿತಾದ ಪುಸ್ತಕವನ್ನು ಹೊರತರಲಾಗುತ್ತಿದೆ ಎಂದು ಜಿ.ವಿ.ರವಿಕುಮಾರ್ ವಿವರಿಸಿದರು.

ಹರಪಳ್ಳಿ ರವೀಂದ್ರ ಅಭಿಮಾನಿಗಳ ಬಳಗದ ಅಧ್ಯಕ್ಷ ಹೆಚ್.ಎ.ನಾಗರಾಜು ಮಾತನಾಡಿ, ಹರಪಳ್ಳಿ ರವೀಂದ್ರ ಅವರು ಯಾವುದೇ ಪ್ರಚಾರ ಬಯಸದೆ ಎಲೆಮರೆಯ ಕಾಯಿಯಂತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ವಿವಿಧ ಗ್ರಾಮಗಳ ಕೆರೆಗಳನ್ನು ಅಭಿವೃದ್ಧಿಪಡಿಸಿ ಶಾಶ್ವತವಾಗಿ ನೀರು ಸಂಗ್ರಹವಾಗುವಂತೆ ಮಾಡಿದ್ದಾರೆ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಸ್ಪಂದಿಸುವ ಗುಣ ಅವರಲ್ಲಿದೆ ಎಂದರು.

ಬಳಗದ ಪ್ರಮುಖ ಜಿ.ಎ.ಮಧುಕುಮಾರ್ ಮಾತನಾಡಿ, ಸೋಮವಾರಪೇಟೆಯಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ವಸತಿಗೃಹ ನಿರ್ಮಾಣಗೊಂಡಿದ್ದು, ಇದು ಹರಪಳ್ಳಿ ರವೀಂದ್ರ ಅವರ ವಿದ್ಯಾರ್ಥಿಗಳ ಮೇಲಿನ ಕಾಳಜಿಗೆ ಸಾಕ್ಷಿಯಾಗಿದೆ ಎಂದರು.

ಕೊಳಗದಾಳು ಗ್ರಾಮದಲ್ಲಿ 25 ಎಕರೆ ಪ್ರದೇಶದಲ್ಲಿ ವಿದ್ಯಾಸಂಸ್ಥೆ ಸ್ಥಾಪಿಸಲಾಗುತ್ತಿದೆ. ವಿರಾಜಪೇಟೆಯಲ್ಲಿಯೂ ಒಕ್ಕಲಿಗರ ಅಭ್ಯುದಯಕ್ಕಾಗಿ ಭೂಮಿ ಖರೀದಿಸಲಾಗಿದೆ. ಸೋಮವಾರಪೇಟೆಯ ದೇವರ ಕೆರೆ ಮತ್ತು ಆನೆ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಶಾಂತಳ್ಳಿಯಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವುದರ ಜೊತೆಗೆ ಶಾಲೆಯೊಂದಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸಮಾಜಸೇವೆಗೆ ಸಂಬಂಧಿಸಿದಂತೆ ಕೆಂಪೇಗೌಡ ಪ್ರಶಸ್ತಿ, ಆಧುನಿಕ ಭಗೀರಥ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸಮಾಜಸೇವೆಯನ್ನೇ ಜೀವನದ ಧ್ಯೇಯವಾಗಿಸಿಕೊಂಡಿರುವ ಅವರ ಕುರಿತಾದ ಪುಸ್ತಕವನ್ನು ಹೊರತರುತ್ತಿರುವುದು ಸಾರ್ಥಕ ಕಾರ್ಯವಾಗಿದೆ ಎಂದು ತಿಳಿಸಿದರು.

ಪುಸ್ತಕದ ಸಂಪಾದಕ ಹಾಗೂ ಕೊಡಗು ಚಾನಲ್‌ನ ವರದಿಗಾರ ಟಿ.ಜೆ.ಪ್ರವೀಣ್ ಕುಮಾರ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಹಾಗೂ ಭೋಜೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ರೈತ ಹೋರಾಟ ಸಮಿತಿ ಸೋಮವಾರಪೇಟೆ ಜಿಲ್ಲಾ ಅಧ್ಯಕ್ಷ ಸುರೇಶ್ ಚಕ್ರವರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಮಲೆನಾಡು ಅಭಿವೃದ್ಧಿ ನಿಗಮದ ನಿರ್ದೇಶಕ ಕೆ.ಎಂ.ಲೋಕೇಶ್, ಕೊಡಗು ಚಾನಲ್‌ನ ಪ್ರಧಾನ ಸಂಪಾದಕ ಜಿ.ವಿ.ರವಿಕುಮಾರ್, ಕೃತಿಯ ಸಂಪಾದಕ ಟಿ.ಜೆ.ಪ್ರವೀಣ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ, ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ ಹಾಗೂ ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಪಾಲ್ಗೊಳ್ಳಲಿದ್ದಾರೆ.

ಇದರೊಂದಿಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದೀಪಕ್ ಬಿ.ಜೆ., ಯುವ ಉದ್ಯಮಿ ಹಾಗೂ ಸಮಾಜಸೇವಕ ಪ್ರಸನ್ನ ಎಡಿಕೇರಿ, ಕೊಡಗು ರೈತ ಸಂಘದ ಅಧ್ಯಕ್ಷ ಮನು ಸೋಮಯ್ಯ, ಉಪಾಧ್ಯಕ್ಷ ಹೂವಯ್ಯ ಮಾಸ್ಟರ್, ತಾಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಹಾಗೂ ಹರಪಳ್ಳಿ ರವೀಂದ್ರ ಅಭಿಮಾನಿಗಳ ಬಳಗದ ಅಧ್ಯಕ್ಷ ಹೆಚ್.ಎ.ನಾಗರಾಜು ಉಪಸ್ಥಿತರಿರಲಿದ್ದಾರೆ.

ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹರಪಳ್ಳಿ ರವೀಂದ್ರ ಅವರ ಸಾಮಾಜಿಕ ಕಾಳಜಿ, ಸೇವಾ ಚಟುವಟಿಕೆಗಳು ಮತ್ತು ಒಕ್ಕಲಿಗ ಸಮುದಾಯದ ಸಂಘಟನೆಯಲ್ಲಿ ಅವರ ಪಾತ್ರವನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಕೃತಿಯನ್ನು ಹೊರತರಲಾಗುತ್ತಿದೆ.

ಕಾರ್ಯಕ್ರಮಕ್ಕೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಟಿ.ಜೆ.ಪ್ರವೀಣ್ ಕುಮಾರ್ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್

ನವೆಂಬರ್ 20, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗದ ಪ್ರತ್ಯೇಕ ಗುರುತಿಗಾಗಿ ನ.23ರಂದು ಹುದಿಕೇರಿಯಲ್ಲಿ ಸಿಎನ್‌ಸಿಯ 11ನೇ ಮಾನವ ಸರಪಳಿ

ನವೆಂಬರ್ 20, 2026

73ನೇ ಸಹಕಾರ ಸಪ್ತಾಹದ ಸಮಾರೋಪ: ಕೊಡಗಿನ ಸಹಕಾರಿ ಕ್ಷೇತ್ರದ ಪಾರದರ್ಶಕತೆ ರಾಜ್ಯಕ್ಕೆ ಮಾದರಿ – ಶಾಸಕ ಪೊನ್ನಣ್ಣ ಶ್ಲಾಘನೆ; ಸಹಕಾರ ಕ್ಷೇತ್ರದ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ನವೆಂಬರ್ 20, 2026

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.20: ಕೊಡಗು ಜಿಲ್ಲೆಯಲ್ಲಿ ಸಮಾಜಸೇವೆ ಹಾಗೂ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಶ್ರಮಿಸುವ ಮೂಲಕ ಜನಪರ ವ್ಯಕ್ತಿಯಾಗಿ…

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗದ ಪ್ರತ್ಯೇಕ ಗುರುತಿಗಾಗಿ ನ.23ರಂದು ಹುದಿಕೇರಿಯಲ್ಲಿ ಸಿಎನ್‌ಸಿಯ 11ನೇ ಮಾನವ ಸರಪಳಿ

ನವೆಂಬರ್ 20, 2026

73ನೇ ಸಹಕಾರ ಸಪ್ತಾಹದ ಸಮಾರೋಪ: ಕೊಡಗಿನ ಸಹಕಾರಿ ಕ್ಷೇತ್ರದ ಪಾರದರ್ಶಕತೆ ರಾಜ್ಯಕ್ಕೆ ಮಾದರಿ – ಶಾಸಕ ಪೊನ್ನಣ್ಣ ಶ್ಲಾಘನೆ; ಸಹಕಾರ ಕ್ಷೇತ್ರದ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ನವೆಂಬರ್ 20, 2026

ಎರಡನೇ ಮೊಣ್ಣಂಗೇರಿಯಲ್ಲಿ ಯೋಗ ಸಿಂಚನಾ ಕಾರ್ಯಕ್ರಮ

ನವೆಂಬರ್ 20, 2026

ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಬಳಿ ಮತ್ತು ರಾಜಾಸೀಟ್ ರಸ್ತೆಯ ಪುರಾತನ ಮರಗಳ ಸಂರಕ್ಷಣೆಗೆ ಸಿಎನ್‌ಸಿ ಆಗ್ರಹ

ನವೆಂಬರ್ 20, 2026

ಸುಂಟಿಕೊಪ್ಪದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡದ ಹಿತರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ: ಎ. ಲೋಕೇಶ್ ಕುಮಾರ್

ನವೆಂಬರ್ 20, 2026

ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು

ನವೆಂಬರ್ 20, 2026

ಚಕ್ಕೇರ ಮನು ಕಾವೇರಪ್ಪ ನಿಧನಕ್ಕೆ ಸೋಮವಾರಪೇಟೆ ಬಿಜೆಪಿ ಸಂತಾಪ

ನವೆಂಬರ್ 20, 2026

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ : ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅಸಮಾಧಾನ : ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ

ನವೆಂಬರ್ 20, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.