Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆ

ನವೆಂಬರ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ನ.20: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಲವು ವರ್ಷಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ವಿರಾಜಪೇಟೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಮೂಲಕ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ಭಾಗವಾಗಿ ಈ ಮನವಿ ಸಲ್ಲಿಸಲಾಯಿತು. ಕಲ್ಯಾಣ ಮಂಡಳಿಯ ಅಧಿಕಾರಿಗಳು, ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಕಲ್ಯಾಣ ಮಂಡಳಿಯ ಅಧ್ಯಕ್ಷರೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಗಮನಕ್ಕೆ ಹಲವು ವರ್ಷಗಳಿಂದ ಸಮಸ್ಯೆಗಳನ್ನು ತಂದಿದ್ದರೂ ಯಾವುದೇ ಪರಿಹಾರ ದೊರೆತಿಲ್ಲ ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಎ.ಸಿ. ಸಾಬು ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕಾರ್ಮಿಕ ಸಂಹಿತೆಯ ಸಾಮಾಜಿಕ ಭದ್ರತಾ ಸಂಹಿತೆಯ ಸೆಕ್ಷನ್ 2(7)ರ ಪ್ರಕಾರ, 50 ಲಕ್ಷ ರೂ.ಗಿಂತ ಕಡಿಮೆ ವೆಚ್ಚದ ಕಾಮಗಾರಿಗಳಲ್ಲಿ ದುಡಿಯುವವರನ್ನು ಕಟ್ಟಡ ಕಾರ್ಮಿಕರೆಂದು ಪರಿಗಣಿಸದಿರುವುದು ಕಾರ್ಮಿಕ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದರು.

ಇದರಿಂದ ಸೆಸ್ ಸಂಗ್ರಹಕ್ಕೆ ಅಡ್ಡಿಯಾಗುವುದರೊಂದಿಗೆ ಕಲ್ಯಾಣ ಮಂಡಳಿಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳಲಾಗುತ್ತಿದೆ. ಅಲ್ಲದೆ, ಮಂಡಳಿಯ ನಿಧಿಯನ್ನು ಷೇರು ಮಾರುಕಟ್ಟೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸದೆ, ಕಾರ್ಮಿಕ ಸ್ನೇಹಿ ಪರ್ಯಾಯ ಕಾನೂನುಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕರ ಶೈಕ್ಷಣಿಕ ಸಹಾಯಧನವನ್ನು 717 ಕೋಟಿ ರೂ.ಗಳಿಂದ 148 ಕೋಟಿ ರೂ.ಗಳಿಗೆ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. 8,33,859 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಆಧಾರ್ ಹಾಗೂ NPCI ಮ್ಯಾಪಿಂಗ್ ಹೆಸರಿನಲ್ಲಿ 1,88,217 ಅರ್ಜಿಗಳಿಗೆ ಹಣ ಪಾವತಿಯಾಗಿಲ್ಲ ಎಂದು ದೂರಿದರು.

ಮಳೆಗಾಲ ಅಥವಾ ಕೆಲಸವಿಲ್ಲದ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗುವ ಕಾರ್ಮಿಕರ ಅರ್ಜಿಗಳನ್ನು ‘ಕುಟುಂಬ ಆಪ್’ ಆಧಾರದ ಮೇಲೆ ತಿರಸ್ಕರಿಸುವುದನ್ನು ನಿಲ್ಲಿಸಬೇಕು. ಎಲ್‌ಕೆಜಿಯಿಂದ ಎಂಜಿನಿಯರಿಂಗ್‌ವರೆಗಿನ ಶೈಕ್ಷಣಿಕ ಸಹಾಯಧನವನ್ನು ಹೆಚ್ಚಿಸಬೇಕು. ವೈದ್ಯಕೀಯ, ಐಐಟಿ, ಎನ್‌ಐಟಿ ಸೇರಿದಂತೆ ಮಾನ್ಯತೆ ಪಡೆದ ಕೋರ್ಸ್‌ಗಳಿಗೆ ಸರ್ಕಾರಿ ಶುಲ್ಕವನ್ನು ಭರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಎಸ್. ರಮೇಶ್ ಶಾಜಿ ಮಾತನಾಡಿ, ಕಾರ್ಮಿಕರಿಂದ ಅರ್ಜಿ ಪಡೆಯದೆಯೇ ನೂರಾರು ಕೋಟಿ ರೂ. ವೆಚ್ಚದಲ್ಲಿ ಕಳಪೆ ಗುಣಮಟ್ಟದ ಕಿಟ್‌ಗಳನ್ನು ಖರೀದಿಸಲಾಗುತ್ತಿದ್ದು, ಇದರಲ್ಲಿ ಭಾರಿ ಅವ್ಯವಹಾರ ನಡೆದಿರುವ ಶಂಕೆಯಿದೆ ಎಂದು ಆರೋಪಿಸಿದರು. ಕಿಟ್ ಖರೀದಿಯನ್ನು ಸ್ಥಗಿತಗೊಳಿಸಿ ತನಿಖೆ ನಡೆಸಬೇಕು. ಕಾರ್ಮಿಕರ ವೈದ್ಯಕೀಯ ತಪಾಸಣೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ 800 ಕೋಟಿ ರೂ. ಅವ್ಯವಹಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಸಿಕ ಪಿಂಚಣಿಯನ್ನು 5,000 ರೂ.ಗಳಿಗೆ ಹಾಗೂ ಕುಟುಂಬ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸಬೇಕು. ಕಂದಾಯ ಇಲಾಖೆಯ ನಿರಪೇಕ್ಷಣಾ ಪತ್ರದ ಷರತ್ತನ್ನು ರದ್ದುಪಡಿಸಿ, ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪಿಂಚಣಿ ಪಾವತಿಸಬೇಕು. ಜನ್ಮ ದಿನಾಂಕದಲ್ಲಿ ಹೊಂದಾಣಿಕೆ ಇಲ್ಲದ ಅರ್ಜಿಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಪಿಂಚಣಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಈ ಎಲ್ಲಾ ಬೇಡಿಕೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಸಂಘಟನೆಯ ಮುಖಂಡರೊಂದಿಗೆ ಕೂಡಲೇ ಸಭೆ ನಿಗದಿಪಡಿಸಬೇಕು ಎಂದು ಮನವಿ ಪತ್ರದ ಮೂಲಕ ಒತ್ತಾಯಿಸಲಾಯಿತು.

ವಿರಾಜಪೇಟೆ ಕಾರ್ಮಿಕ ಇಲಾಖೆಯ ನವೀನ್ ಅವರು ಮನವಿ ಪತ್ರವನ್ನು ಸ್ವೀಕರಿಸಿ, ಸರ್ಕಾರಕ್ಕೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಖಜಾಂಚಿ ಖಾಸಿಂ ಕೆ.ಎ., ರಾಜ್ಯ ಸಮಿತಿ ಸದಸ್ಯರಾದ ಕೆ.ಕೆ. ಹರಿದಾಸ್, ಜಿಲ್ಲಾ ಸಮಿತಿ ಸದಸ್ಯರಾದ ಸಿ.ಎ. ಹಮೀದ್, ಕೆ.ಎನ್. ರತೀಸ್, ಚೆಲುವ, ಕುಮಾರ್, ಗಣೇಶ್, ಸಾದಿಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ರೋಟರಿ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ

ನವೆಂಬರ್ 20, 2026

ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿ

ನವೆಂಬರ್ 20, 2026

Kodava Film ‘Kote Betta’ Selected for 32nd Kolkata International Film Festival

ನವೆಂಬರ್ 20, 2026

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆ

ನವೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.20: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಲವು ವರ್ಷಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ,…

ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿ

ನವೆಂಬರ್ 20, 2026

Kodava Film ‘Kote Betta’ Selected for 32nd Kolkata International Film Festival

ನವೆಂಬರ್ 20, 2026

ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್

ನವೆಂಬರ್ 20, 2026

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗದ ಪ್ರತ್ಯೇಕ ಗುರುತಿಗಾಗಿ ನ.23ರಂದು ಹುದಿಕೇರಿಯಲ್ಲಿ ಸಿಎನ್‌ಸಿಯ 11ನೇ ಮಾನವ ಸರಪಳಿ

ನವೆಂಬರ್ 20, 2026

73ನೇ ಸಹಕಾರ ಸಪ್ತಾಹದ ಸಮಾರೋಪ: ಕೊಡಗಿನ ಸಹಕಾರಿ ಕ್ಷೇತ್ರದ ಪಾರದರ್ಶಕತೆ ರಾಜ್ಯಕ್ಕೆ ಮಾದರಿ – ಶಾಸಕ ಪೊನ್ನಣ್ಣ ಶ್ಲಾಘನೆ; ಸಹಕಾರ ಕ್ಷೇತ್ರದ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ನವೆಂಬರ್ 20, 2026

ಎರಡನೇ ಮೊಣ್ಣಂಗೇರಿಯಲ್ಲಿ ಯೋಗ ಸಿಂಚನಾ ಕಾರ್ಯಕ್ರಮ

ನವೆಂಬರ್ 20, 2026

ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಬಳಿ ಮತ್ತು ರಾಜಾಸೀಟ್ ರಸ್ತೆಯ ಪುರಾತನ ಮರಗಳ ಸಂರಕ್ಷಣೆಗೆ ಸಿಎನ್‌ಸಿ ಆಗ್ರಹ

ನವೆಂಬರ್ 20, 2026

ಸುಂಟಿಕೊಪ್ಪದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡದ ಹಿತರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ: ಎ. ಲೋಕೇಶ್ ಕುಮಾರ್

ನವೆಂಬರ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.