ವಿರಾಜಪೇಟೆ, NEWS DESK ನ.20: ಮೈಸೂರಿನ ವಿ.ಎನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿಯಲ್ಲಿ ನಡೆದ ‘ಮೈಸೂರು ಕಪ್ 6ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್-2026’ರಲ್ಲಿ ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಗೆಲ್ಲುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡಿದ್ದ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಗಿಲಾನ್ ಹಾಗೂ 6ನೇ ತರಗತಿ ವಿದ್ಯಾರ್ಥಿ ಪ್ರಜನ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ, ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ರಾಷ್ಟ್ರಮಟ್ಟದ ಸಾಧನೆಗೆ ರೋಟರಿ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
















