ಮಡಿಕೇರಿ, NEWS DESK ನ.20: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನವೆಂಬರ್ 22ರಂದು ಬೆಳಗ್ಗೆ ಮಹಾಪೂಜೆಯ ಬಳಿಕ ತುಳಸಿ ಪೂಜೆ ನಡೆಯಲಿದೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ತುಳಸಿ ಪೂಜೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಥ್ಯೂ ಬಿ.ಎನ್. ಮನವಿ ಮಾಡಿದ್ದಾರೆ.















