ಮಡಿಕೇರಿ, NEWS DESK ನ.20: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರ ಸ್ವಾಮಿ ಅವರು ನವೆಂಬರ್ 21ರಂದು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 10.30ಕ್ಕೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೋಬಳಿಯ ಹಾಲುಗುಂದ ಗ್ರಾಮದ ಕೊಂಡಂಗೇರಿ ಶಾದಿ ಮಹಲ್ನಲ್ಲಿ ನಡೆಯಲಿರುವ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ.
ಈ ಕುರಿತು ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ. ವಿರೂಪಾಕ್ಷ ಅವರು ಮಾಹಿತಿ ನೀಡಿದ್ದಾರೆ.















