ಮಡಿಕೇರಿ, NEWS DESK ನ.20: ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನವೆಂಬರ್ 21ರಂದು ಮಡಿಕೇರಿಯ ಸರ್ಕಾರಿ ವಸ್ತು ಸಂಗ್ರಹಾಲಯದಲ್ಲಿ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ.
ಹುಣಸೂರಿನ ನಾಣ್ಯಶಾಸ್ತ್ರಜ್ಞ ಹಾಗೂ ಪ್ರಾಚೀನ ನಾಣ್ಯ ಸಂಗ್ರಹಕಾರ ಪಿ.ಕೆ. ಕೇಶವಮೂರ್ತಿ ಅವರು ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಿಶೇಷ ಅಂಚೆ ಚೀಟಿಗಳು, ಪ್ರಾಚೀನ ನಾಣ್ಯಗಳು ಮತ್ತು ಹಳೆಯ ನೋಟುಗಳ ಸಂಗ್ರಹವನ್ನು ಪ್ರದರ್ಶಿಸಲಿದ್ದಾರೆ.
ಕಾರ್ಯಕ್ರಮವನ್ನು ಕೊಡಗು-ಮಡಿಕೇರಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಮಾರುತಿ ಎಸ್. ಬಾಗಡೆ ಅವರು ನವೆಂಬರ್ 21ರಂದು ಬೆಳಗ್ಗೆ 9.45ಕ್ಕೆ ಉದ್ಘಾಟಿಸಲಿದ್ದಾರೆ.
ಈ ಕುರಿತು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ರೇಖಾ ಬಿ.ಪಿ. ಅವರು ಮಾಹಿತಿ ನೀಡಿದ್ದಾರೆ.















