Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ನ.21: ಭವಿಷ್ಯದ ಭಾರತದ ನವಶಿಲ್ಪಿಗಳಾದ ಇಂದಿನ ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ನಾಡಿನ ಸಂಸ್ಕೃತಿಯ ಜೊತೆಗೆ ಹನ್ನೆರಡನೇ ಶತಮಾನದ ವಚನಕಾರರ ಮೌಲ್ಯಗಳನ್ನು ಅರಿತುಕೊಳ್ಳುವ ಮೂಲಕ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವೆ ಪ್ರೊ. ಭಾರತಿ ಹಿರೇಮಠ್ ಕರೆ ನೀಡಿದರು.

ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ‘ಶರಣರ ವಚನಗಳಲ್ಲಿ ಕಾಯಕ ಪ್ರಜ್ಞೆ’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅವಧಿಯಲ್ಲಿ ಎಲ್ಲ ಭಾಷೆಗಳ ಅರಿವು ಇರಬೇಕು. ಜೊತೆಗೆ ಸತ್ಯ, ಶುದ್ಧ ಕಾಯಕ ಪ್ರಜ್ಞೆ ಜಾಗೃತವಾಗಿರಬೇಕು. ಯಾವುದೇ ಕೆಲಸವಾಗಿರಲಿ, ಕಾಯಕ ಮಾಡದೆ ಉಣ್ಣಬಾರದು. ಕಾಯಕದಿಂದ ಗಳಿಸಿದ ಆದಾಯದಲ್ಲಿ ಒಂದಿಷ್ಟನ್ನು ಸಮಾಜಕ್ಕೂ ಮೀಸಲಿಡುವ ಮೂಲಕ ಸಮಾನತೆಗೆ ಒತ್ತು ನೀಡಿದ ಬಸವೇಶ್ವರರ ತತ್ವ ಮತ್ತು ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅರಿತುಕೊಳ್ಳಬೇಕು ಎಂದರು.

800 ವರ್ಷಗಳಿಗೂ ಹಿಂದೆಯೇ ಬಸವೇಶ್ವರರು ನಿರ್ಮಿಸಿದ ಅನುಭವ ಮಂಟಪವು ಇಂದಿನ ಭಾರತದ ಸಂಸದೀಯ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವದ ತೊಟ್ಟಿಲಾಗಿದೆ. ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರು ಬೋಧಿಸಿದ ‘ಕಾಯಕವೇ ಕೈಲಾಸ’ ಎಂಬ ತತ್ವ ಇಂದು ವಿಶ್ವಮಟ್ಟದಲ್ಲಿ ಅಭಿವೃದ್ಧಿಯ ಮಂತ್ರವಾಗಿ ಮಾರ್ಪಟ್ಟಿದೆ. ಆದ್ದರಿಂದ ಯುವಜನಾಂಗ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸಬೇಕು ಎಂದು ತಿಳಿಸಿದರು.

ಕಾಯಕದ ಮೇಲೆ ಶ್ರದ್ಧೆ, ನಿಷ್ಠೆ ಇರಲಿ

ವಚನಗಳಲ್ಲಿ ಕಾಯಕ ಪ್ರಜ್ಞೆ ವಿಷಯದ ಕುರಿತು ಉಪನ್ಯಾಸ ನೀಡಿದ ಕುಶಾಲನಗರದ ನಳಂದ ಗುರುಕುಲ ಕೋಚಿಂಗ್ ಸೆಂಟರ್ ಪ್ರಾಂಶುಪಾಲ ಕುಮಾರ್ ಚಾಮರಾಜನಗರ ಮಾತನಾಡಿ, ಇಂದಿನ ಯುವಜನಾಂಗ ಕಾಯಕದಲ್ಲಿ ತಲ್ಲೀನರಾಗಬೇಕು. ಕಾಯಕದಿಂದಲೇ ಮಾನವ ಕಲ್ಯಾಣ ಸಾಧ್ಯ. ಯಾವುದೇ ಕೆಲಸವಾಗಿರಲಿ, ಅದರ ಬಗ್ಗೆ ಶ್ರದ್ಧೆ ಮತ್ತು ನಿಷ್ಠೆ ಇರಬೇಕು. ಶುದ್ಧ ಕಾಯಕದಿಂದ ಗಳಿಸಿದ ಸಂಪಾದನೆಯನ್ನು ಅಗತ್ಯವಿದ್ದಷ್ಟು ಮಾತ್ರ ಬಳಸಬೇಕು. ‘ನಾನು ಮಾಡಿದೆ, ನನ್ನಿಂದಲೇ’ ಎಂಬ ಅಹಂಕಾರ ಇರಬಾರದು. ಮಾಡುವ ಕೆಲಸದಲ್ಲಿ ಆತ್ಮಶುದ್ಧಿ ಹಾಗೂ ನಿಷ್ಠೆ ಇರಬೇಕು ಎಂದು ಹೇಳಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಪುಟ್ಟರಾಜು ವಚನಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಉಪನ್ಯಾಸಕ ಚಿದಂಬರ, ಸತೀಶ್ ಕುಮಾರ್, ಶಿವಕುಮಾರ್, ಸ್ಪೂರ್ತಿ, ಸೋನಿಯಾ, ಕೆ.ಆರ್. ರಮೇಶ್, ಜಗದೀಶ್, ಮಹೇಶ್, ಪ್ರವೀಣ್ ಹಾಗೂ ರೇವಣ್ಣ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ವಚನ ಗಾಯನ ಕಾರ್ಯಕ್ರಮವೂ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.