Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೂರ್ನಾಡು, NEWS DESK ನ.21: ಪಠ್ಯಪುಸ್ತಕಗಳ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಹೇಳಿದರು.

ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಆದರೆ ಮಾಡಿದ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯುವ ಮನೋಭಾವ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಾಲೆಗಳಲ್ಲಿ ದೊರೆಯುವ ವಿವಿಧ ವೇದಿಕೆಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಅವರಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯ. ಸೋಲು-ಗೆಲುವು ಸಹಜವಾಗಿದ್ದು, ಸಾಧನೆಗೆ ನಿರಂತರ ಪರಿಶ್ರಮ ಅತ್ಯಗತ್ಯ ಎಂದು ಹೇಳಿದರು.

ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಳಿಸದೆ, ಪ್ರತಿವರ್ಷ ಗ್ರಾಮೀಣ ಭಾಗದ ವಿವಿಧ ಶಾಲೆಗಳಲ್ಲಿಯೂ ಆಯೋಜಿಸಬೇಕು. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯಲಿವೆ ಎಂದರು.

ಮೂರ್ನಾಡು ಸರ್ಕಾರಿ ಪ್ರೌಢಶಾಲೆಗೆ ಅಗತ್ಯವಿರುವ ಶಾಶ್ವತ ವೇದಿಕೆ, ಸಭಿಕರು ಕುಳಿತುಕೊಳ್ಳಲು ಮೇಲ್ಛಾವಣಿ, ಶಾಲಾ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕರ ನಿಧಿಯಿಂದ ಅನುದಾನ ಒದಗಿಸಿ, ಆದಷ್ಟು ಶೀಘ್ರ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ., ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ಮಂಜುಳ ಚಿತ್ರಾಪುರ, ಮಡಿಕೇರಿ ತಾಲೂಕು ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರ ಕೆ.ಎಂ., ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಜೆ. ಕುಮಾರ್, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಪಿ.ಎಸ್. ರವಿಕೃಷ್ಣ, ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಕೆ.ಎಂ. ಶರತ್, ಮಡಿಕೇರಿ ತಾಲೂಕು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಡಿ. ಗಣೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಶಾಲಪ್ಪ ಎಸ್., ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಮೋಹನ್ ಪೆರಾಜೆ, ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಪಿ. ರಮ್ಯ, ತಾಲೂಕು ಶಿಕ್ಷಣ ಸಂಯೋಜಕಿ ಐ.ಜೆ. ಜಾನೆಟ್, ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಂಸ, ಮೂರ್ನಾಡು ಕ್ಲಸ್ಟರ್ ಅಧಿಕಾರಿ ಉಷಾ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ ಕೆ. ಉಪಸ್ಥಿತರಿದ್ದರು.

ಮಡಿಕೇರಿ ತಾಲೂಕಿನ 13 ಕ್ಲಸ್ಟರ್‌ಗಳಿಂದ ಆಗಮಿಸಿದ್ದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ ಕೆ. ಸ್ವಾಗತಿಸಿದರು. ಸಹಶಿಕ್ಷಕಿ ದೇಚಮ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.