Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗೌರವ : ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ ಪ್ರದಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗೌರವ : ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ನವೆಂಬರ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.24 : ಕೊಡಗಿನ ಬಹುಮುಖ ಪ್ರತಿಭೆಯ ಚಿತ್ರಶಿಲ್ಪ ಕಲಾವಿದ, ಲೇಖಕ ಹಾಗೂ ಸಾಂಸ್ಕೃತಿಕ ಸೇವಾ ಸಾಧಕ ಬಿ.ಕೆ.ಗಣೇಶ್ ರೈ ಅವರಿಗೆ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ‘ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್’ ನೀಡಿ ಗೌರವಿಸಲಾಗಿದೆ. ಕನ್ನಡ ಭಾಷೆ, ನಾಡು, ನುಡಿ, ಕಲೆ, ಸಂಸ್ಕೃತಿ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಬೆಂಗಳೂರಿನ ಪ್ರತಿಷ್ಠಿತ ಸ್ವರ್ಣ ಭಾರತ್ ಫೌಂಡೇಶನ್ ಬಿ.ಕೆ.ಗಣೇಶ್ ರೈ ಅವರಿಗೆ ‘ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ 2026’ ಪ್ರಶಸ್ತಿ ಪ್ರದಾನ ಮಾಡಿತು.
ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ ಮಂದಿರದ ಭವ್ಯ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣೇಶ್ ರೈ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಕರ್ನಾಟಕದ ಪ್ರಸಿದ್ಧ ಗಾಯಕ, ರಂಗಭೂಮಿ ಹಾಗೂ ಕಿರುತೆರೆ ನಟ ಶಶಿಧರ್ ಕೋಟೆ, ಸ್ವರ್ಣ ಭಾರತ್ ಫೌಂಡೇಶನ್‌ನ ಮುಖ್ಯಸ್ಥರಾದ ಡಾ. ರಜನಿ ಸಂತೋಷ್ ಹಾಗೂ ಪರಿಮಳ ಜಗ್ಗೇಶ್ ಅವರು ಅತಿಥಿಗಳಾಗಿ ಉಪಸ್ಥಿತರಿದ್ದು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಸ್ತುತ ದುಬೈನಲ್ಲಿ ಅನಿವಾಸಿ ಕನ್ನಡಿಗರಾಗಿ ನೆಲೆಸಿರುವ ಬಿ.ಕೆ.ಗಣೇಶ್ ರೈ ಅವರು ಕಳೆದ ಐದು ದಶಕಗಳಿಂದ ಚಿತ್ರಕಲೆ, ಶಿಲ್ಪಕಲೆ, ಸಾಹಿತ್ಯ, ಬರವಣಿಗೆ, ಮಾಧ್ಯಮ, ಸಂಪನ್ಮೂಲ ವ್ಯಕ್ತಿ ಹಾಗೂ ಸಮಾಜ ಸೇವೆಯ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಬಹುಮುಖ ಕಲಾತ್ಮಕ ಸಾಧನೆ ಮತ್ತು ಸಾಂಸ್ಕೃತಿಕ ಸೇವೆಯನ್ನು ಗುರುತಿಸಿ ದುಬೈ ಕಲ್ಚರಲ್ ಮಿನಿಸ್ಟ್ರಿ ವತಿಯಿಂದ ಪ್ರತಿಷ್ಠಿತ ಕಲ್ಚರಲ್ ಗೋಲ್ಡನ್ ವೀಸಾ ನೀಡಿ ಗೌರವಿಸಿರುವುದು ಅವರ ಸಾಧನೆಗೆ ಮತ್ತೊಂದು ಮಹತ್ವದ ಹೆಗ್ಗಳಿಕೆಯಾಗಿದೆ. ಜನ್ಮಭೂಮಿ ಭಾರತದಲ್ಲಿ ಹಾಗೂ ಕರ್ಮಭೂಮಿ ದುಬೈನಲ್ಲಿ ಕನ್ನಡ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಗಣೇಶ್ ರೈ ಅವರು ವಿದೇಶದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಕರ್ನಾಟಕದ ಸಂಸ್ಕೃತಿ, ಪರಂಪರೆ ಮತ್ತು ಕಲಾ ವೈಭವವನ್ನು ಪ್ರತಿಬಿಂಬಿಸುತ್ತಿದ್ದಾರೆ.
ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು, ಗೌರವ ಸನ್ಮಾನಗಳು ಮತ್ತು ಮನ್ನಣೆಗಳನ್ನು ಪಡೆದಿರುವ ಬಿ.ಕೆ.ಗಣೇಶ್ ರೈ ಅವರ ಸಾಧನೆಯ ಕಿರೀಟಕ್ಕೆ ಇದೀಗ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ 2026’ ಮತ್ತೊಂದು ಅಮೂಲ್ಯ ಗರಿಯನ್ನು ಸೇರಿಸಿದೆ. ಕಲೆ, ಸಾಹಿತ್ಯ, ಕನ್ನಡ ಭಾಷಾ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಬಿ.ಕೆ.ಗಣೇಶ್ ರೈ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಕಲಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಎಸ್ ಎಸ್ ಆಸ್ಪತ್ರೆ ವತಿಯಿಂದ 4ನೇ ವರ್ಷದ ಚಿತ್ರಕಲಾ ಸ್ಪರ್ಧೆ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ನವೆಂಬರ್ 24, 2026

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆ : ಕ್ರಿಸ್‌ಮಸ್ ಗೀತ ಗಾಯನ ಸ್ಪರ್ಧೆಯ ಕುರಿತು ಚರ್ಚೆ : ಮಡಿಕೇರಿ ಅಧ್ಯಕ್ಷರಾಗಿ ಪಿಯೂಷ್ ಪೆರೆರಾ ಆಯ್ಕೆ

ನವೆಂಬರ್ 24, 2026

ನ.29ರಂದು ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ : ಕಾಲೇಜ್ ನ ಅಭಿವೃದ್ಧಿಗೆ ಕೈಜೋಡಿಸಲು ಮನವಿ

ನವೆಂಬರ್ 24, 2026

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆ : ಕ್ರಿಸ್‌ಮಸ್ ಗೀತ ಗಾಯನ ಸ್ಪರ್ಧೆಯ ಕುರಿತು ಚರ್ಚೆ : ಮಡಿಕೇರಿ ಅಧ್ಯಕ್ಷರಾಗಿ ಪಿಯೂಷ್ ಪೆರೆರಾ ಆಯ್ಕೆ

ನವೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.24 : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಮಾಸಿಕ ಸಭೆಯು ಸೋಮವಾರಪೇಟೆಯ ಜಯವೀರ…

ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗೌರವ : ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ನವೆಂಬರ್ 24, 2026

ನ.29ರಂದು ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ : ಕಾಲೇಜ್ ನ ಅಭಿವೃದ್ಧಿಗೆ ಕೈಜೋಡಿಸಲು ಮನವಿ

ನವೆಂಬರ್ 24, 2026

ಹಿಮವನ ಪ್ರತಿಭಾ ಸಂಗಮ ಕನ್ನಡ ಹಬ್ಬಕ್ಕೆ ಉತ್ಸಾಹದ ಸ್ಪಂದನೆ : ಮಕ್ಕಳಿಗೆ ಉತ್ತಮ ಮೌಲ್ಯ ಕಲಿಸಬೇಕು : ಕೊಟ್ಟುಕತ್ತಿರ ಯಶೋದಾ ಪ್ರಕಾಶ್

ನವೆಂಬರ್ 23, 2026

ಯಾಕುಬ್ ಅವರಿಗೆ ಆದ ಅನ್ಯಾಯ ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯದ ರಾಜಕೀಯ ಅಸ್ತಿತ್ವ ಮತ್ತು ಸ್ವಾಭಿಮಾನದ ಪ್ರಶ್ನೆ : ನಿಷ್ಠಾವಂತ ಮುಸ್ಲಿಂ ನಾಯಕರನ್ನು ಕಡೆಗಣಿಸುವ ರಾಜಕೀಯ ಸಂಸ್ಕೃತಿಗೆ ಅಂತ್ಯ ಯಾವಾಗ? : ಎಂ.ವೈ. ಅಬ್ದುಲ್ ಹಫೀಲ್ ಸಾದಿ ಕೊಳಕೇರಿ ಅಸಮಾಧಾನ

ನವೆಂಬರ್ 23, 2026

ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಯೋಜನೆಯಿಂದ ರೂ. 2 ಲಕ್ಷ ನೆರವು : ಚೆಕ್ ವಿತರಣೆ

ನವೆಂಬರ್ 23, 2026

ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮ ಬಗ್ಗೆ ಎಚ್ಚರಿಕೆ ವಹಿಸಿ: ಮಾರುತಿ ಎಸ್.ಬಾಗಡೆ

ನವೆಂಬರ್ 23, 2026

ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 23, 2026

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನದ ಬಲ: ತುರ್ತು ಚಿಕಿತ್ಸೆಗೆ 2.50 ಲಕ್ಷ ರೂ. ವರೆಗೆ ನೆರವು : ಡಾ.ಶಾಲಿನಿ ರಜನೀಶ್

ನವೆಂಬರ್ 23, 2026

ಅಂಬೇಡ್ಕರ್ ಪರಿನಿರ್ವಾಣ ದಿನ : ಡಿ.5 ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ

ನವೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.