ಮಡಿಕೇರಿ ನ. 24 NEWS DESK : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಗ್ರೇಡ್-1 ಪ್ರಾಂಶುಪಾಲರ ಹುದ್ದೆಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರೊ. ದಯಾನಂದ ಕೆ.ಸಿ. ಅವರು ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ನೇಮಕಗೊಂಡು ನವೆಂಬರ್ 23ರಂದು ಅಧಿಕಾರ ಸ್ವೀಕರಿಸಿದರು. ಭಾಗಮಂಡಲ ನಾಡಿನ ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಮತ್ತು ಹರಿಣಾಕ್ಷಿ ದಂಪತಿಯ ಪುತ್ರರಾದ ಪ್ರೊ. ದಯಾನಂದ ಕೆ.ಸಿ. ಅವರು ಈ ಹಿಂದೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವ ಮೂಲಕ ಗ್ರೇಡ್-1 ಪ್ರಾಂಶುಪಾಲರ ಹುದ್ದೆಗೆ ಆಯ್ಕೆಯಾಗಿರುವ ಇವರು, ಇದೀಗ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಪ್ರಸ್ತುತ ಅವರು ಮಡಿಕೇರಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿದ್ದಾರೆ.

















