ಮಡಿಕೇರಿ, ನ.25 NEWS DESK : ಮಡಿಕೇರಿ ತಾಲೂಕಿನ ವಿಕಾಸ್ ಜನ ಸೇವಾ ಟ್ರಸ್ಟ್ನ ವೃದ್ಧಾಶ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 32 ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಟಿ.ಎಂ. ಅಯ್ಯಪ್ಪ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಲೀಲಾ ಶೇಷಮ್ಮ, ಶೌರ್ಯ ಘಟಕದ ಕ್ಯಾಪ್ಟನ್ ಮುನೀರ್, ವಿಕಾಸ್ ಟ್ರಸ್ಟ್ನ ಮೋಹನ್ ಹಾಗೂ ಯೋಜನಾಧಿಕಾರಿ ಪುರುಷೋತ್ತಮ್ ಉಪಸ್ಥಿತರಿದ್ದರು. ಯೋಜನೆಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



































