Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನ ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದರೆ ಸಾಕ್ಷ್ಯ ನೀಡಲಿ : ಪ್ರತಾಪ್ ಸಿಂಹ ವಿರುದ್ಧ ಹಿಂದೂ ಮಲಯಾಳಿ ಸಂಘಟನೆಗಳ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನ ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದರೆ ಸಾಕ್ಷ್ಯ ನೀಡಲಿ : ಪ್ರತಾಪ್ ಸಿಂಹ ವಿರುದ್ಧ ಹಿಂದೂ ಮಲಯಾಳಿ ಸಂಘಟನೆಗಳ ಅಸಮಾಧಾನ

ನವೆಂಬರ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.27: ಕೊಡಗಿನ ಸಂಸ್ಕೃತಿಯನ್ನು ಮಲಯಾಳಿ ಸಮುದಾಯ ನಾಶ ಮಾಡುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನಿರ್ದಿಷ್ಟ ಸಾಕ್ಷ್ಯಗಳಿದ್ದರೆ ಅವುಗಳನ್ನು ಬಹಿರಂಗಪಡಿಸಲಿ ಎಂದು ಕೊಡಗಿನ ವಿವಿಧ ಹಿಂದೂ ಮಲಯಾಳಿ ಸಂಘಟನೆಗಳು ಆಗ್ರಹಿಸಿವೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಕೆ. ಸುಧೀರ್, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜ ಸೇರಿದಂತೆ ಜಿಲ್ಲೆಯ ವಿವಿಧ ಹಿಂದೂ ಮಲಯಾಳಿ ಸಂಘಟನೆಗಳು, ಕೊಡಗು ಜಿಲ್ಲಾ ಎಸ್‌ಎನ್‌ಡಿಪಿ, ವಿಶ್ವಕರ್ಮ ಸಂಘಟನೆ, ಕೆಎನ್‌ಎಸ್ ಹಾಗೂ ತೀಯನ್ ಮಹಾಸಭಾ ಸಂಘಟನೆಗಳು ಜಂಟಿಯಾಗಿ ಸಭೆ ನಡೆಸಿ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ಖಂಡಿಸಿವೆ ಎಂದು ತಿಳಿಸಿದರು.

ಕೊಡಗು ಮತ್ತು ಕೇರಳದ ನಡುವಿನ ಬಾಂಧವ್ಯ ತಲೆಮಾರುಗಳಿಂದಲೂ ಬೆಳೆದುಬಂದಿದೆ. ವ್ಯಾಪಾರ, ಹಬ್ಬಗಳು ಹಾಗೂ ಧಾರ್ಮಿಕ ಆಚರಣೆಗಳು ಈ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿವೆ. ಕೊಡಗಿನ ಹಲವು ಕುಟುಂಬಗಳು ಹಾಗೂ ದೇವಾಲಯಗಳ ಪೂಜಾ ಸಂಪ್ರದಾಯಗಳು ಕೇರಳದೊಂದಿಗೆ ನಂಟು ಹೊಂದಿವೆ. ಎರಡೂ ಪ್ರದೇಶಗಳ ಜನರು ಪರಸ್ಪರರ ನಂಬಿಕೆ ಮತ್ತು ಆಚರಣೆಗಳನ್ನು ಗೌರವಿಸುತ್ತಾ ಬಂದಿದ್ದಾರೆ ಎಂದರು.

ಕೊಡಗಿನ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಮಲಯಾಳಿ ಸಮುದಾಯಕ್ಕೆ ಅಪಾರ ಗೌರವವಿದೆ. ಕೊಡವ ಸಮುದಾಯ ಸೇರಿದಂತೆ ಜಿಲ್ಲೆಯ ಎಲ್ಲಾ ಸಮುದಾಯಗಳೊಂದಿಗೆ ಮಲಯಾಳಿಗಳು ಸೌಹಾರ್ದಯುತವಾಗಿ ಬದುಕುತ್ತಿದ್ದಾರೆ. ಜಿಲ್ಲೆಯ ಕೃಷಿ, ವ್ಯಾಪಾರ, ಶಿಕ್ಷಣ ಹಾಗೂ ಸೇವಾ ಕ್ಷೇತ್ರಗಳಲ್ಲಿಯೂ ಸಮುದಾಯದವರು ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ನಮ್ಮ ಸಮುದಾಯದ ಸಂಸ್ಕೃತಿ ಮತ್ತು ಸಂಸ್ಕಾರಕ್ಕೆ ರಾಜಕೀಯ ನಾಯಕರಿಂದ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಹೇಳಿದರು.

ಯಾರಾದರೂ ತಪ್ಪು ಮಾಡಿದ್ದರೆ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ಅದಕ್ಕಾಗಿ ಇಡೀ ಸಮುದಾಯವನ್ನೇ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಕೊಡಗಿನ ಸಂಸ್ಕೃತಿಯ ಸಂರಕ್ಷಣೆಗೆ ಸಂಬಂಧಿಸಿದಂತೆ ಯಾವುದೇ ಆತಂಕಗಳಿದ್ದರೆ ಪರಸ್ಪರ ಗೌರವದಿಂದ ಚರ್ಚಿಸಲು ಸಮುದಾಯ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.

ಪ್ರತಾಪ್ ಸಿಂಹ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು, ಸಾರ್ವಜನಿಕವಾಗಿ ಸಮುದಾಯಕ್ಕೆ ಉಂಟಾಗಿರುವ ನೋವಿಗೆ ವಿಷಾದ ವ್ಯಕ್ತಪಡಿಸಬೇಕು. ಇಲ್ಲದಿದ್ದರೆ ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಎನ್‌ಡಿಪಿ ಜಿಲ್ಲಾ ಉಪಾಧ್ಯಕ್ಷ ಕೆ.ವಿ. ಪ್ರೇಮಾನಂದ, ವಿರಾಜಪೇಟೆ ಹಿಂದೂ ಮಲಯಾಳಿ ಸಂಘದ ಮಹಿಳಾ ಸಮಿತಿ ಸದಸ್ಯೆ ಶೀಬಾ ಪೃಥ್ವಿನಾಥ್, ಗೋಣಿಕೊಪ್ಪಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಪಿ. ಪ್ರಶಾಂತ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಕೊಡಗು ಜಿಲ್ಲಾ ತೀಯನ್ ಮಹಾಸಭಾದ ಉಪಾಧ್ಯಕ್ಷ ಅಶೋಕ್ ಕುಮಾರ್ ಹಾಗೂ ಹಿಂದೂ ಮಲಯಾಳಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಣ್ಣಿಕೃಷ್ಣನ್ ಎನ್.ವಿ. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಯನಾಡು ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026

ಸೋಮವಾರಪೇಟೆಯಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಮಾನವ ಸರಪಳಿ ಮೂಲಕ ಜಾಗೃತಿ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ನ.27: ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದಲ್ಲಿ ಮುಂಬರುವ ತಾಲೂಕು ಹಾಗೂ ಜಿಲ್ಲಾ…

ಸೋಮವಾರಪೇಟೆಯಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಮಾನವ ಸರಪಳಿ ಮೂಲಕ ಜಾಗೃತಿ

ನವೆಂಬರ್ 27, 2026

ಮಡಿಕೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ : ಕನಕದಾಸರ ಚಿಂತನೆ, ಕೀರ್ತನೆಗಳು ಮಾನವಕುಲಕ್ಕೆ ಸದಾ ದಾರಿದೀಪ – ಜಯಲಕ್ಷ್ಮಿ ರಾಯಕೋಡ್

ನವೆಂಬರ್ 27, 2026

ಕೊಡಗಿನ ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದರೆ ಸಾಕ್ಷ್ಯ ನೀಡಲಿ : ಪ್ರತಾಪ್ ಸಿಂಹ ವಿರುದ್ಧ ಹಿಂದೂ ಮಲಯಾಳಿ ಸಂಘಟನೆಗಳ ಅಸಮಾಧಾನ

ನವೆಂಬರ್ 27, 2026

ಹಿರಿಯ ಪತ್ರಕರ್ತ ಎಂ. ಶ್ರೀಧರ್ ಹೂವಲ್ಲಿ ಅವರಿಗೆ ‘ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

ನವೆಂಬರ್ 27, 2026

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.