Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ. 28: ಆಶಾ ಕಾರ್ಯಕರ್ತೆಯರ ಕುರಿತು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಆಶಾ ಕಾರ್ಯಕರ್ತರು ಇದ್ದರೂ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ” ಎಂಬ ಸಚಿವರ ಹೇಳಿಕೆ ಆಶಾ ಕಾರ್ಯಕರ್ತೆಯರನ್ನು ಅವಮಾನಿಸುವುದಲ್ಲದೆ, ಅವರ ಸೇವಾ ಮನೋಭಾವ ಮತ್ತು ಕೆಲಸ ಮಾಡುವ ಉತ್ಸಾಹವನ್ನು ಕುಗ್ಗಿಸುವಂತಿದೆ ಎಂದು ಟೀಕಿಸಿದ್ದಾರೆ.

ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತುಕೊಳ್ಳುವ ಸಚಿವರಿಗೆ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರು, ಗರ್ಭಿಣಿಯರು ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡಲು ಆಶಾ ಕಾರ್ಯಕರ್ತೆಯರು ಪಡುವ ಶ್ರಮ ಮತ್ತು ಅವರ ಸೇವೆಯ ಮಹತ್ವ ಅರ್ಥವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬವನ್ನೂ ಲೆಕ್ಕಿಸದೆ, ಜೀವದ ಹಂಗು ತೊರೆದು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಹಗಲಿರುಳು ಶ್ರಮಿಸಿದ್ದಾರೆ. ಬೆಳಿಗ್ಗೆ, ರಾತ್ರಿ ಎನ್ನದೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ ಸೋಂಕು ನಿಯಂತ್ರಣ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇಂತಹ ಸೇವೆ ಸಲ್ಲಿಸಿದ ಕಾರ್ಯಕರ್ತೆಯರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗೌರವ ಇದೇನಾ ಎಂದು ಅವರು ಪ್ರಶ್ನಿಸಿದ್ದಾರೆ.

ಗ್ರಾಮಮಟ್ಟದಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಎದುರಾದರೂ ಮೊದಲು ರೋಗಿಯ ನೆರವಿಗೆ ಧಾವಿಸುವವರು ಆಶಾ ಕಾರ್ಯಕರ್ತೆಯರು. ಗರ್ಭಿಣಿಯರ ಆರೋಗ್ಯದ ಕಾಳಜಿ, ಮಕ್ಕಳ ಆರೋಗ್ಯ ರಕ್ಷಣೆ, ಲಸಿಕಾ ಕಾರ್ಯಕ್ರಮಗಳು ಹಾಗೂ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ವಾಸ್ತವವನ್ನು ಸಚಿವರು ಮೊದಲು ಅರಿತುಕೊಳ್ಳಬೇಕು. ಅಧಿಕಾರದ ಅಮಲಿನಲ್ಲಿ ಮನಬಂದಂತೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಸರ್ಕಾರದ ಹಲವು ಜನಪ್ರತಿನಿಧಿಗಳು ತಾವು ಮಾತನಾಡಿದ್ದೇ ಸರಿ ಎಂಬ ಧೋರಣೆಯಿಂದ ವರ್ತಿಸುತ್ತಿದ್ದು, ಜನರ ಭಾವನೆಗಳಿಗೆ ಗೌರವ ನೀಡುತ್ತಿಲ್ಲ. ಸಚಿವರು ಹಾಗೂ ಶಾಸಕರ ಇಂತಹ ವರ್ತನೆಗಳಿಂದ ಜನರು ಬೇಸತ್ತಿದ್ದು, ಆಶಾ ಕಾರ್ಯಕರ್ತೆಯರ ಸೇವೆಯನ್ನು ಅವಮಾನಿಸುವ ಹೇಳಿಕೆಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಸೇವೆಯನ್ನು ಗೌರವಿಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಮನೋಸ್ಥೈರ್ಯ ಕುಗ್ಗಿಸುವ ಹೇಳಿಕೆಗಳನ್ನು ನೀಡದೆ, ಅವರ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ಗೌರವ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಮಡಿಕೇರಿಯಲ್ಲಿ ಡಿ.4ರಿಂದ 6ರವರೆಗೆ 5ನೇ ವರ್ಷದ ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; 12 ತಂಡಗಳ ನಡುವೆ ರೋಚಕ ಹಣಾಹಣಿ; ಪ್ರಥಮ ಬಹುಮಾನ ₹2 ಲಕ್ಷ, ಸುಮಾರು 250 ಆಟಗಾರರು ಭಾಗಿ

ನವೆಂಬರ್ 28, 2026

ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ನವೆಂಬರ್ 27, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ. 28: ಆಶಾ ಕಾರ್ಯಕರ್ತೆಯರ ಕುರಿತು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್…

ಮಡಿಕೇರಿಯಲ್ಲಿ ಡಿ.4ರಿಂದ 6ರವರೆಗೆ 5ನೇ ವರ್ಷದ ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; 12 ತಂಡಗಳ ನಡುವೆ ರೋಚಕ ಹಣಾಹಣಿ; ಪ್ರಥಮ ಬಹುಮಾನ ₹2 ಲಕ್ಷ, ಸುಮಾರು 250 ಆಟಗಾರರು ಭಾಗಿ

ನವೆಂಬರ್ 28, 2026

ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ನವೆಂಬರ್ 27, 2026

ಕಡಬ ಬಳಿ ಭೀಕರ ರಸ್ತೆ ಅಪಘಾತ: ಸೋಮವಾರಪೇಟೆಯ ವಿಶ್ವಾಸ್ (31) ದುರ್ಮರಣ

ನವೆಂಬರ್ 27, 2026

ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆ

ನವೆಂಬರ್ 27, 2026

ಕುಶಾಲನಗರದಲ್ಲಿ ಸಂಭ್ರಮದ ಶ್ರೀ ಮಹಾಗಣಪತಿ ರಥೋತ್ಸವ

ನವೆಂಬರ್ 27, 2026

ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕೆ.ಎ. ಯಾಕುಬ್ ಖಂಡನೆ

ನವೆಂಬರ್ 27, 2026

ನಿಧನ ಸುದ್ದಿ

ನವೆಂಬರ್ 27, 2026

ಕೊಯನಾಡು ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.