Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.29: ಕೊಡಗು ಜಿಲ್ಲೆಯಲ್ಲಿ ಅನೇಕ ಸಣ್ಣ ಭಾಷಿಕ ಸಮುದಾಯಗಳಿದ್ದು, ಅವುಗಳಲ್ಲಿ ಅರೆಭಾಷೆಯೂ ಪ್ರಮುಖ ಸ್ಥಾನ ಹೊಂದಿದೆ. ಅರೆಭಾಷೆ ಸೇರಿದಂತೆ ಎಲ್ಲಾ ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಂಬು ಗ್ರಾಮದ ಕೂಡಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರೆಭಾಷೆಯ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ತನ್ನದೇ ಆದ ಇತಿಹಾಸವಿದ್ದು, ವಿಶೇಷ ಸ್ಥಾನಮಾನವಿದೆ. ಕನ್ನಡದ ಉಪಭಾಷೆಯಾಗಿರುವ ಅರೆಭಾಷೆಯ ಸಂಸ್ಕೃತಿ, ಪರಂಪರೆ ಮತ್ತು ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ. ಇಲ್ಲಿನ ಆಹಾರ ಪದ್ಧತಿ, ಸಂಪ್ರದಾಯಗಳು ಮತ್ತು ಹಬ್ಬಗಳು ವಿಶಿಷ್ಟ ಮಾನ್ಯತೆ ಹೊಂದಿವೆ ಎಂದು ಹೇಳಿದರು.

ಅರೆಭಾಷೆ ಉಳಿದರೆ ಸಮಾಜವೂ ಉಳಿಯುತ್ತದೆ. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಬರಹಗಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಅರೆಭಾಷೆಯಲ್ಲಿ ಮತ್ತಷ್ಟು ಸಂಶೋಧನೆಗಳು ನಡೆಯಬೇಕು. ಯುನೆಸ್ಕೋ ವರದಿಗಳ ಪ್ರಕಾರ ಸಣ್ಣ ಭಾಷೆಗಳು ಅಳಿವಿನ ಅಪಾಯ ಎದುರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಭಾಷೆ ಮತ್ತು ಸಾಹಿತ್ಯ ಉಳಿದರೆ ಜನಾಂಗದ ಅಸ್ಮಿತೆಯೂ ಉಳಿಯುತ್ತದೆ. ಸಣ್ಣ ಸಮುದಾಯಗಳು ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಕಾಪಾಡಿಕೊಂಡು ಸಹೋದರತ್ವ ಹಾಗೂ ಭಾತೃತ್ವದಿಂದ ಒಂದಾಗಬೇಕು. ತಮ್ಮ ಭಾಷೆ, ಸಾಹಿತ್ಯವನ್ನು ಬೆಳೆಸುವುದರ ಜೊತೆಗೆ ನಾಡಿನ ಅಭಿವೃದ್ಧಿಗೂ ಶ್ರಮಿಸಬೇಕು. ವಿವಿಧತೆಯಲ್ಲಿ ಏಕತೆ ಇರಬೇಕು ಎಂದು ಕರೆ ನೀಡಿದರು.

ಅರೆಭಾಷೆ ಸಾಹಿತ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಓದುವ ಮೂಲಕ ಹೊಸ ಲೇಖಕರು ಮತ್ತು ಬರಹಗಾರರು ಹೊರಹೊಮ್ಮಬೇಕು. ಹೆಚ್ಚಿನ ಪುಸ್ತಕಗಳು ಪ್ರಕಟವಾಗಬೇಕು. ಜನಸಂಖ್ಯೆಯಲ್ಲಿ ಕಡಿಮೆ ಇದ್ದರೂ ಕೊಡಗಿನ ವಿವಿಧ ಸಮಾಜಗಳು ಹಲವು ದಶಕಗಳಿಂದ ದೇಶಕ್ಕಾಗಿ ಸಲ್ಲಿಸಿರುವ ಸೇವೆ ಗಮನಾರ್ಹವಾಗಿದೆ ಎಂದು ಶ್ಲಾಘಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ದಯಾನಂದ ಕೂಡಕಂಡಿ, ಮಿಲನ ಭರತ್ ಅವರ ಸಂಶೋಧನಾ ಪುಸ್ತಕಗಳು ಹಾಗೂ ಉಮೇಶ್ ಬಿಳಿನೆಲೆ ಅವರ ಕಾದಂಬರಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, ರಾಜ್ಯದಲ್ಲಿ 290 ಭಾಷೆಗಳಿದ್ದು, 10 ಸಾವಿರಕ್ಕೂ ಹೆಚ್ಚು ಜನರು ಮಾತನಾಡುವ 27 ಭಾಷೆಗಳಿವೆ. ಈ ಹಿನ್ನೆಲೆಯಲ್ಲಿ ಅರೆಭಾಷೆಯನ್ನು ಮೂರನೇ ಭಾಷೆಯಾಗಿ ಅಧ್ಯಯನ ಮಾಡಲು ಅವಕಾಶ ಕಲ್ಪಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಭಾಷೆಗಳ ನಡುವೆ ಸಂಘರ್ಷ ಉಂಟಾಗದಂತೆ ಎಚ್ಚರ ವಹಿಸಬೇಕು. ಒಂದು ಭಾಷೆಯ ಅಧಃಪತನ ಆ ಭಾಷೆಯೊಂದರ ಅಳಿವಿಗೆ ಮಾತ್ರವಲ್ಲ, ಆ ಭಾಷೆಯ ಸಮುದಾಯದ ಅಸ್ಮಿತೆಗೂ ಧಕ್ಕೆ ಉಂಟುಮಾಡುತ್ತದೆ. ಮಾತೃಭಾಷೆಯಲ್ಲಿ ಮಾತನಾಡುವಾಗ ಸಹಜವಾಗಿಯೇ ಭಾವನಾತ್ಮಕ ಸಂಬಂಧ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.

ಇಂಗ್ಲಿಷ್ ಶಿಕ್ಷಣ ಅಗತ್ಯವಾದರೂ ಸ್ಥಳೀಯ ಭಾಷೆಗಳ ಅಸ್ತಿತ್ವವನ್ನು ಕಡೆಗಣಿಸಬಾರದು. ಇತ್ತೀಚಿನ ದಿನಗಳಲ್ಲಿ ಇಂಗ್ಲಿಷ್ ಭಾಷೆಯ ಪ್ರಭಾವ ಹೆಚ್ಚಾಗುತ್ತಿದ್ದು, ಮುಂದಿನ 70 ವರ್ಷಗಳಲ್ಲಿ ಶೇ.92ರಷ್ಟು ಸಣ್ಣ ಭಾಷೆಗಳು ಅವನತಿಯತ್ತ ಸಾಗುವ ಆತಂಕವಿದೆ. ರಾಜ್ಯದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಕನ್ನಡ ಶಾಲೆಗಳು ಮುಚ್ಚಿದ್ದು, ಇಂಗ್ಲಿಷ್ ಭಾಷೆಯ ಪ್ರಾಬಲ್ಯ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅಕಾಡೆಮಿ ವತಿಯಿಂದ ಗಡಿನಾಡ ಉತ್ಸವ, ಗ್ರಾಮೋತ್ಸವ, ಗೌರವ ಪ್ರಶಸ್ತಿ ಪ್ರದಾನ, 15 ಸಂಶೋಧನಾ ಪ್ರಬಂಧಗಳ ಪ್ರಕಟಣೆ ಸೇರಿದಂತೆ ನೂರಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಹೊರತರಲಾಗಿದೆ ಎಂದು ಮಾಹಿತಿ ನೀಡಿದರು.

ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಮಾತನಾಡಿ, ಅಕಾಡೆಮಿ ವತಿಯಿಂದ ನಾಟಕ, ಸಣ್ಣಕಥೆ, ಸಾಂಸ್ಕೃತಿಕ ಸಮಾವೇಶ, ಸುದ್ದಿಜೊಂಪೆ ಪ್ರಾಯೋಜಕತ್ವ ಹಾಗೂ ಹಿಂಗಾರ ತ್ರೈಮಾಸಿಕ ಪತ್ರಿಕೆ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಮರಿಸಿದರು.

ಹಿಂದಿನ ಸಮ್ಮೇಳನದ ಅಧ್ಯಕ್ಷ ಭವಾನಿ ಶಂಕರ ಹೊದ್ದೆಟ್ಟಿ ಮಾತನಾಡಿ, ಅರೆಭಾಷೆಯಲ್ಲಿ ಬರೆಯುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು ಎಂದರು.

ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಸೂರಜ್ ಹೊಸೂರು ಮಾತನಾಡಿ, ಕನ್ನಡದ ಜೊತೆಗೆ ಸ್ಥಳೀಯ ಅರೆಭಾಷೆಯನ್ನೂ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ್ ಎನ್.ಸಿ. ಊರುಬೈಲು ಮಾತನಾಡಿದರು.

ಸಮ್ಮೇಳನಾಧ್ಯಕ್ಷೆ ಲೀಲಾ ದಾಮೋದರ ಕುಂದಲ್ಪಾಡಿ ಮಾತನಾಡಿ, ತುಳು ಮತ್ತು ಕೊಂಕಣಿ ಭಾಷೆಗಳಿಗೆ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ ದೊರೆತಿರುವಂತೆ ಐದು ಲಕ್ಷಕ್ಕೂ ಅಧಿಕ ಜನರು ಮಾತನಾಡುವ ಅರೆಭಾಷೆಗೂ ಈ ಸ್ಥಾನಮಾನ ದೊರೆಯಬೇಕು. ಈ ನಿಟ್ಟಿನಲ್ಲಿ ಅರೆಭಾಷಿಕ ಸಮುದಾಯ ಸಂಘಟಿತವಾಗಿ ಬೇಡಿಕೆ ಸಲ್ಲಿಸಬೇಕು ಎಂದರು.

ಅರೆಭಾಷೆಯ ಕವನಗಳಿಗೆ ಪಠ್ಯದಲ್ಲಿ ಸ್ಥಾನ ದೊರೆತಿರುವ ಮಾದರಿಯಲ್ಲಿ ಸ್ಮಿತಾ ಅವರ ಪ್ರಬಂಧ ಹಾಗೂ ಕವನಗಳಿಗೂ ಸ್ಥಾನ ಲಭಿಸಿರುವುದು ಸಂತಸದ ವಿಚಾರ. ಅರೆಭಾಷೆಯನ್ನು ಮೂರನೇ ಭಾಷೆಯಾಗಿ ಕಲಿಯಲು ಹಾಗೂ ಪ್ರಮಾಣಪತ್ರದ ಅಗತ್ಯವಿಲ್ಲದೆ ಡಿಪ್ಲೊಮಾ ಕೋರ್ಸ್ ರೂಪದಲ್ಲಿ ಅಧ್ಯಯನ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅರೆಭಾಷಿಕರ ಬಹುದಿನಗಳ ಕನಸಾಗಿರುವ ‘ಅರೆಭಾಷೆ ಸಂಸ್ಕೃತಿ ಗ್ರಾಮ’ ನಿರ್ಮಾಣ ಕಾರ್ಯಕ್ಕೆ ಮದೆನಾಡು ಗ್ರಾಮದಲ್ಲಿ ಜಾಗ ಮಂಜೂರಾಗಿದ್ದು, ಕಾಮಗಾರಿಗೆ ವೇಗ ನೀಡಬೇಕು. ಇದರಿಂದ ಭಾಷೆಯ ಬೆಳವಣಿಗೆಗೆ ಹೆಚ್ಚಿನ ನೆರವಾಗಲಿದೆ ಎಂದು ತಿಳಿಸಿದರು.

ಮಡಿಕೇರಿ ಆಕಾಶವಾಣಿಯಲ್ಲಿ ಅರೆಭಾಷೆ ಕಾರ್ಯಕ್ರಮ ಪ್ರಸಾರವಾಗುತ್ತಿರುವ ಮಾದರಿಯಲ್ಲಿ ಮಂಗಳೂರು ಆಕಾಶವಾಣಿಯಲ್ಲಿಯೂ ಅರೆಭಾಷೆಯ ‘ಸುದ್ದಿಜೊಂಪೆ’ ಕಾರ್ಯಕ್ರಮ ಪ್ರಸಾರವಾಗಲು ಪ್ರಯತ್ನ ನಡೆಸಬೇಕು ಎಂದರು.

ಸಾಹಿತ್ಯ ಮತ್ತು ಸಂಸ್ಕೃತಿ ಕೇವಲ ಮನರಂಜನೆಯ ಸಾಧನಗಳಲ್ಲ. ಅವು ಅನುಭವ, ತಿಳುವಳಿಕೆ ಹಾಗೂ ಆತ್ಮವಿಮರ್ಶೆಯ ಪ್ರತಿಬಿಂಬಗಳಾಗಿವೆ. ವಿಜ್ಞಾನ ಮತ್ತು ತಂತ್ರಜ್ಞಾನ ಬದುಕನ್ನು ಸುಲಭಗೊಳಿಸಿದರೂ, ಮನಸ್ಸಿನ ಆಂತರಿಕ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಸಾಹಿತ್ಯದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 2026

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.29: ಕೊಡಗು ಜಿಲ್ಲೆಯಲ್ಲಿ ಅನೇಕ ಸಣ್ಣ ಭಾಷಿಕ ಸಮುದಾಯಗಳಿದ್ದು, ಅವುಗಳಲ್ಲಿ ಅರೆಭಾಷೆಯೂ ಪ್ರಮುಖ ಸ್ಥಾನ ಹೊಂದಿದೆ.…

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.