Tuesday, December 10, 2019 8:47 AM

ಕನ್ನಡಕ್ಕೆ ಒಟ್ಟು 11 ರಾಷ್ಟ್ರ ಪ್ರಶಸ್ತಿ
155
ಕನ್ನಡಕ್ಕೆ ಒಟ್ಟು 11 ರಾಷ್ಟ್ರ ಪ್ರಶಸ್ತಿ

ಬೆಂಗಳೂರು ಆ.೯ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್, ಶೃತಿ ಹರಿಹರನ್ ಅಭಿನಯದ ನಾತಿಚರಾಮಿ ಚಿತ್ರಗಳು ಸೇರಿದಂತೆ ಕನ್ನಡಕ್ಕೆ ಒಟ್ಟು ೧೧ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ವರ್ಷದಲ್ಲಿ ಇಷ್ಟು ಪ್ರಶಸ್ತಿಗಳು ಬಂದಿರುವುದು ಇದೇ ಮೊದಲು.
ಪ್ರತಿಷ್ಠಿತ ೬೫ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ನವದೆಹಲಿಯಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಪ್ರಕಟಿಸಿದರು.
ಪ್ರಶಸ್ತಿ ಪಟ್ಟಿ

 • ಅತ್ಯುತ್ತಮ ಪ್ರಾದೇಶಿಕ ಚಿತ್ರ – ನಾತಿಚರಾಮಿ
 • ಅತ್ಯುತ್ತಮ ಮಹಿಳಾ ಗಾಯಕಿ (ಮಾಯಾವಿ ಮಾನವೆ ಹಾಡು) (ಬಿಂಧು ಮಾಲಿನಿ ಗಾಯಕಿ) – ನಾತಿಚರಾಮಿ
 • ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ – ನಾತಿಚರಾಮಿ
 • ಅತ್ಯುತ್ತಮ ಸಂಕಲನ – ನಾತಿಚರಾಮಿ
 • ಅತ್ಯುತ್ತಮ ಸಾಹಸ ಚಿತ್ರ – ಕೆಜಿಎಫ್
 • ಅತ್ಯುತ್ತಮ ವಿಎಫ್ ಎಕ್ಸ್ ಚಿತ್ರ – ಕೆಜಿಎಫ್
 • ಅತ್ಯುತ್ತಮ ರಾಷ್ಟ್ರೀಯ ಏಕತಾ ಚಿತ್ರ – ಒಂದಲ್ಲ, ಎರಡಲ್ಲ
 • ಅತ್ಯುತ್ತಮ ಬಾಲ ಕಲಾವಿದ – ಒಂದಲ್ಲ, ಎರಡಲ್ಲ
 • ಅತ್ಯುತ್ತಮ ಮಕ್ಕಳ ಚಿತ್ರ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೂಡು
 • ಅತ್ಯುತ್ತಮ ರಾಷ್ಟ್ರೀಯ ಆಕ್ರ್ಸೂಸ್ ಚಿತ್ರ – ಮೂಕಜ್ಜಿಯ ಕನಸುಗಳು
 • ನಾತಿಚರಾಮಿ ಚಿತ್ರದ ಅಭಿನಯಕ್ಕಾಗಿ ನಟಿ ಶೃತಿ ಹರಿಹರನ್ ಗೆ ವಿಶೇಷ ಪ್ರಶಸ್ತಿ

“ಬಧಾಯಿ ಹೋ” ಚಿತ್ರದ ಅಭಿನಯಕ್ಕಾಗಿ ಆಯುಷ್ಮಾನ್ ಖುರಾನಾ ಹಾಗೂ “ಉರಿ: ದಿ ಸರ್ಜಿಕಲ್ ಸ್ಟ್ರೈಕ್’” ನಟ ವಿಕ್ಕಿ ಕೌಶಲ್ ಅವರುಗಳು ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.ನಟಿ ಕೀರ್ತಿ ಸುರೇಶ್ “ಮಹಾನಟಿ” ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
“ಮಹಾನಟಿ” ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿ ಬಾಚಿಕೊಂಡಿದ್ದರೆ ’ಅಂಧಾಧುನ್’ ಚಿತ್ರಕ್ಕೆ ಅತ್ಯುತ್ತಮ ಹಿಂದಿ ಭಾಷಾ ಚಿತ್ರ ಪ್ರಶಸ್ತಿ ಲಭಿಸಿದೆ.
ಚೊಚ್ಚಲ “ಉರಿ: ದಿ ಸರ್ಜಿಕಲ್ ಸ್ಟ್ರೈಕ್” ಗಾಗಿ ಆದಿತ್ಯ ಧಾರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಗೆದ್ದರೆ, “ಅಂಧಾಧುನ್” ಅತ್ಯುತ್ತಮ ಹಿಂದಿ ಚಲನಚಿತ್ರ ಮತ್ತು ಅತ್ಯುತ್ತಮ ಚಿತ್ರಕಥೆಗಾಗಿ ಪ್ರಶಸ್ತಿಗಳನ್ನು ಗೆದ್ದಿದೆ.
ಗರ್ಭಧಾರಣೆ ತಡವಾಗಿ ಸಮಸ್ಯೆ ಎದುರಿಸುವ ಕೌಟುಂಬಿಕ ಕಥಾನಕವನ್ನೊಳಗೊಂಡ “ಬಧಾಯಿ ಹೋ” ಅತ್ಯುತ್ತಮ ಜನಪ್ರಿಯ ಚಿತ್ರವೆಂದು ಪ್ರಶಸ್ತಿ ಗಳಿಸಿದರೆ ಹಿರಿಯ ನಟ ಸುರೇಖಾ ಸಿಕ್ರಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಗಿಟ್ಟಿಸಿದ್ದಾರೆ.
ಇನ್ನು ಅಕ್ಷಯ್ ಕುಮಾರ್ ಅವರ “ಪ್ಯಾಡ್ ಮ್ಯಾನ್”ಸಾಮಾಜಿಕ ವಿಷಯಗಳಲ್ಲಿ ಅತ್ಯುತ್ತಮ ಚಿತ್ರವೆಂದು ಪರಿಗಣಿಸಲ್ಪಟ್ಟಿದೆ.ಬಿಡುಗಡೆ ವೇಳೆ ಸಾಕಷ್ಟು ವಿವಾದ,ಕ್ಕೀಡಾಗಿದ್ದ ಸಂಜಯ್ ಲೀಲಾ ಭನ್ಸಾಲಿ ಅವರ “ಪದ್ಮಾವತ್”, ಚಿತ್ರದ “ಘೂಮರ್” ಹಾಡಿನ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಹಾಗೂ ಅತ್ಯುತ್ತಮ ಸಂಗೀತ ನಿರ್ದೇಶನ ವಿಭಾಗದಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.
ಅರಿಜಿತ್ ಸಿಂಗ್ ಅತ್ಯುತ್ತಮ ಮೇಲ್ ಪ್ಲೇ ಬ್ಯಾಕ್ ಸಿಂಗರ್ ( ಹಿನ್ನೆಲೆ ಗಾಯಕ )ಪ್ರಶಸ್ತಿ ಗೆದ್ದಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್