Sunday, August 18, 2019 8:48 AM

ಮನೆ ನಿರ್ಮಿಸಲು 5 ಲಕ್ಷ ರೂ.
40
ಮನೆ ನಿರ್ಮಿಸಲು 5 ಲಕ್ಷ ರೂ.

ಮಂಗಳೂರು ಆ.೧೨ : ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು ೫ ಲಕ್ಷ ರೂ. ಹಾಗೂ ಹಾನಿಗೀಡಾದವರಿಗೆ ದುರಸ್ತಿ ಕಾರ್ಯ ಕೈಗೊಳ್ಳಲು ಒಂದು ಲಕ್ಷ ರೂ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸೋಮವಾರ ಘೋಷಿಸಿದ್ದಾರೆ.
ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪರಿಹಾರ ಘೋಷಿಸಿದರು.
ಪೂರ್ತಿ ಮನೆ ಕಳೆದು ಕೊಂಡವರಿಗೆ ಮನೆ ನಿರ್ಮಾಣ ಮಾಡಲು ೫ ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗುವುದು ಹಾಗೂ ತಕ್ಷಣವೇ ೧೦ ಸಾವಿರ ರೂ ನೀಡಲಾಗುವುದು. ಅಲ್ಲದೆ ಮನೆ ಕಳೆದುಕೊಂಡ ಕುಟುಂಬಕ್ಕೆ ತಕ್ಷಣ ೧೦ ಸಾವಿರ ರೂ. ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್ ಶಶಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು.
ಒಂದು ವೇಳೆ ಸಂತ್ರಸ್ತರು ಬಾಡಿಗೆ ಮನೆಯಲ್ಲಿ ವಾಸಿಸುವುದಾದರೆ ಮಾಸಿಕ ೫ ಸಾವಿರ ರೂ ಪರಿಹಾರ ಒದಗಿಸುವುದಾಗಿ ತಿಳಿಸಿದರು.
ಮನೆ ಮಠ ಇಲ್ಲದ ನಿರಾಶ್ರಿತರಿಗೆ ಸರ್ಕಾರದಿಂದ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸೂರಿಲ್ಲದವರಿಗೆ ಸೂರು ಕಲ್ಪಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಗಸ್ಟ್ ೧೬ರ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಜತೆ ಮಾತುಕತೆ ನಡೆಸುವುದಾಗಿಯೂ ಸ್ಪಷ್ಟಪಡಿಸಿದರು.
ಪ್ರವಾಹ ನಿರ್ವಹಣೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ರಾಜ್ಯದ ೮೬ ತಾಲ್ಲೂಕುಗಳ ೨೯೬೪ ಹಳ್ಳಿಗಳು ನೆರೆಯಿಂದ ಜಲಾವೃತಗೊಂಡಿದ್ದು, ೮೧,೮೮೭ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ೧೧೮೧ ಪರಿಹಾರ ಕೇಂದ್ರಗಳನ್ನು ತೆರೆದು ೩,೩೨,೬೨೯ ಜನರಿಗೆ ಆಶ್ರಯ ನೀಡಲಾಗಿದೆ ಎಂದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್