Sunday, September 15, 2019 3:34 AM

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ
14
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ

ಬೆಂಗಳೂರು ಸೆ.9 : ಮಹಾರಾಷ್ಟ್ರದಲ್ಲಿನ ಕೃಷ್ಣಾ ನದಿಯ ಮೇಲ್ದಂಡೆ ಜಲಾಶಯಗಳಿಂದ ಹೊರಹರಿವು ಅಲ್ಪ ಪ್ರಮಾಣದಲ್ಲಿ ಕುಸಿದಿದ್ದರೂ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ನದಿಗಳು ತುಂಬಿ ಹರಿಯುತ್ತಿರುವುದರಿಂದ ಉತ್ತರ ಕರ್ನಾಟಕ ಮತ್ತು ರಾಜ್ಯದ ಇತರೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ.
ಮಹಾರಾಷ್ಟ್ರದ ಅಣೆಕಟ್ಟುಗಳು ಮತ್ತು ಬ್ಯಾರೇಜ್‍ಗಳಿಂದ ಹೊರಹರಿವು ಸ್ವಲ್ಪ ಕಡಿಮೆಯಾಗಿರುವುದರಿಂದ ಕೃಷ್ಣಾ ನದಿಯಲ್ಲಿ ಪ್ರವಾಹ ಮಟ್ಟ ಸ್ವಲ್ಪ ಸುಧಾರಿಸಿದ್ದು, ಇದರಿಂದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಕೆಳಭಾಗದ ಯಾದಗಿರಿ, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಜನರು ತುಸು ನಿರಾಳರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆದರೂ, ಪಶ್ವಿಮ ಘಟ್ಟಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟ್ಟಗಳಲ್ಲಿ ಹುಟ್ಟುವ ನದಿಗಳಾದ ಘಟಪ್ರಭಾ, ಮಲಪ್ರಭಾ, ದೂಧ್‍ಗಂಗಾ, ತುಂಗಾ ಮತ್ತು ಭದ್ರಾ, ನೇತ್ರಾವತಿ, ಕಾವೇರಿ ಮತ್ತು ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.
ಈ ಮಧ್ಯೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಅಥಣಿ ತಾಲ್ಲೂಕುಗಳಲ್ಲಿ ಕೃಷ್ಣಾ ಮತ್ತು ಇತರ ನದಿಗಳ ಪ್ರವಾಹದ ಮಟ್ಟ ಸ್ವಲ್ಪ ಕಡಿಮೆಯಾಗಿದೆ. ಚಿಕ್ಕೋಡಿ ಮತ್ತು ಅಥಣಿ ತಾಲ್ಲೂಕುಗಳಲ್ಲಿ ಐದರಿಂದ ಆರು ಸೇತುವೆಗಳ ಮೇಲೆ ನೀರು ಹರಿಯುತ್ತಿತ್ತು. ಇದೀಗ ನೀರಿನ ಮಟ್ಟ ಕ್ರಮೇಣ ಇಳಿಯುತ್ತಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್