Sunday, September 15, 2019 4:30 AM

ಕೃಷಿ ಭಾಗ್ಯ ಅವ್ಯವಹಾರ ತನಿಖೆಗೆ
38
ಕೃಷಿ ಭಾಗ್ಯ ಅವ್ಯವಹಾರ ತನಿಖೆಗೆ

ಬೆಂಗಳೂರು ಸೆ.9 : ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾಗಿದ್ದ ಕೃಷಿ ಭಾಗ್ಯ ಯೋಜನೆಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.
ಕೃಷಿ ಹೊಂಡ ನಿರ್ಮಾಣ ಸೇರಿದಂತೆ ಸಿದ್ದರಾಮಯ್ಯ ಸರ್ಕಾರದ ಅವಧಿಯ ಐದು ಯೋಜನೆಗಳಲ್ಲಿ ಅಕ್ರಮ ನಡೆದಿರುವ ಶಂಕೆ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ 2014-15ರಲ್ಲಿ ಆರಂಭಗೊಂಡ 921 ಕೋಟಿ ರೂ. ಮೊತ್ತದ ಕೃಷಿ ಭಾಗ್ಯ ಯೋಜನೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ತನಿಖೆಗೆ ಪ್ರತ್ಯೇಕ ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಕೃಷಿ ಭಾಗ್ಯ ಯೋಜನೆ ಹಾಗೂ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಯಲ್ಲಿ ಸಾವಿರಾರು ಕೋಟಿ ರೂ.ಗಳ ಹಗರಣ ನಡೆದಿದೆ ಎಂದು ಈಚೆಗೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇವುಗಳ ಕುರಿತು ಸಮಗ್ರ ತನಿಖೆ ನಡೆಸಿ ಎರಡು ತಿಂಗಳೊಳಗಾಗಿ ವರದಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಸೂಚಿಸಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್