Sunday, September 15, 2019 3:37 AM

ವಿರಾಜಪೇಟೆ ಎನ್‍ಟಿಸಿ ಎಂಟರ್ ಪ್ರೈಸಸ್‍ನಿಂದ ದೇವಣಗೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
76
ವಿರಾಜಪೇಟೆ ಎನ್‍ಟಿಸಿ ಎಂಟರ್ ಪ್ರೈಸಸ್‍ನಿಂದ ದೇವಣಗೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಸಿದ್ದಾಪುರ ಸೆ. 11 : ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ದಾನಿಗಳು ಸಹಕಾರ ನೀಡಿದ್ದಲ್ಲಿ ವಿದ್ಯಾರ್ಥಿಗಳು ಕಲಿಕೆ ಮೂಲಕ ಸಮಾಜದ ಮುಖ್ಯವಾಹಿನಿಗೆ ಬಂದು ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಅಭಿಪ್ರಾಯಸಿದರು
ದೇವಣಗೇರಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿರಾಜಪೇಟೆಯ ಎನ್ ಸಿ ಟಿ ಎಂಟರ್ ಪ್ರೈಸಸ್ ಟೂರ್ಸ್ ಅಂಡ್ ಟ್ರಾವೆಲ್ಸ್ ವತಿಯಿಂದ ನೀಡಿದ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರು ಅದರಲ್ಲಿ ಉಳಿಕೆಯಾಗುವ ಹಣವನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಮೀಸಲಿಟ್ಟು ಉದಾರ ಮನೋಭಾವದಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕೆಂದು ಮನವಿ ಮಾಡಿದ ಅವರು ಏನ್ ಸಿ ಟಿ ಎಂಟರ್ ಪ್ರೈಸಸ್ ನ ಮುಖ್ಯಸ್ಥ ಅಕ್ಕಳತಂಡ ಮೊಯ್ದು ಅವರ ಉದಾರ ಮನಸ್ಸಿನಿಂದ ಈ ಶಾಲೆಯ ಕಡು ಬಡ ವಿದ್ಯಾರ್ಥಿಗಳಿಗೆ 50 ಬ್ಯಾಗುಗಳನ್ನು ವಿತರಿಸಿದ್ದಾರೆ.ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ದುರಂತ ಹಾಗೂ ಪ್ರವಾಹ ಸಂದರ್ಭದಲ್ಲಿ ಆಸ್ತಿ ಪಾಸ್ತಿ ಕಳೆದುಕೊಂಡು ಸಂಕಷ್ಟಕ್ಕೊಳಗಾಗಿರುವ ಕುಟುಂಬಗಳಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ, ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಎನ್ ಸಿ ಟಿ ಎಂಟರ್ ಪ್ರೈಸಸ್ ನ ಮೇಲ್ವಿಚಾರಕ ಹನೀಫ್ ,ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸುಷಾ,ಶಾಲಾ ಮುಖ್ಯ ಶಿಕ್ಷಕಿ ಸುಮತಿ, ಶಿಕ್ಷಕರುಗಳಾದ ಉಷಾ, ಮಹೇಶ್, ಕಮಲಾಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್