Monday, October 21, 2019 8:48 PM

ದಮಯಂತಿ ಟೀಸರ್ ಬಿಡುಗಡೆ
56
ದಮಯಂತಿ ಟೀಸರ್ ಬಿಡುಗಡೆ

ಶ್ರೀ ಲಕ್ಷ್ಮೀವೃಷಾದ್ರಿ ಪ್ರೋಡಕ್ಷನ್ಸ್ ಲಾಂಛನದಲ್ಲಿ ನವರಸನ್ ನಿರ್ಮಿಸಿರುವ ರಾಧಿಕಾ ಕುಮಾರಸ್ವಾಮಿ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ’ ಚಿತ್ರದ ಟೀಸರ್ ಇದೇ ತಿಂಗಳ 18 ರಂದು ಬಿಡುಗಡೆಯಾಗಲಿದೆ.
ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ರ್ಪೂಗೊಂಡಿದೆ.
ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67 ದಿನಗಳ ಚಿತ್ರೀಕರಣ ನಡೆದಿದೆ. ಆರ್.ಎಸ್. ಗಣೇಶ್ ನಾರಾಯಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ. ಕೆ. ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದೆ. ಚಿತ್ರದ ತಾರಾಬಳಗದಲ್ಲಿ ರಾಧಿಕಾ ಕುಮಾರಸ್ವಾಮಿ, ಭಜರಂಗಿ ಲೋಕಿ, ಸಾಧುಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ಹೊನ್ನವಳ್ಳಿ ಕೃಷ್ಣ, ರವಿಗೌಡ, ಬಲರಾಜವಾಡಿ, ವೀಣಾಸುಂದರ್, ಕೆಂಪೇಗೌಡ ಮುಂತಾದವರಿದ್ದಾರೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್