Monday, October 21, 2019 8:21 PM

'ಕೊಡಗ್‍ರ ಸಿಪಾಯಿ' ಕೊಡವ ಚಲನಚಿತ್ರ ಪ್ರದರ್ಶನ ಆರಂಭ
128
'ಕೊಡಗ್‍ರ ಸಿಪಾಯಿ' ಕೊಡವ ಚಲನಚಿತ್ರ ಪ್ರದರ್ಶನ ಆರಂಭ

ಮಡಿಕೇರಿ ಸೆ.25 : ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್‍ನಡಿಯಲ್ಲಿ ಕೊಟ್ಟುಕತ್ತಿರ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದ ಸಾಮಾಜಿಕ ಕಳಕಳಿಯನ್ನು ಪ್ರತಿಬಿಂಬಿಸುವ ಕೊಡವ ಕಾದಂಬರಿ ಆಧಾರಿತಕೊಡಗ್‍ರ ಸಿಪಾಯಿ’ ಕೊಡವ ಚಲನಚಿತ್ರ ತೆರೆ ಕಂಡಿದೆ.
ವಿರಾಜಪೇಟೆ ಕೊಡವ ಸಮಾಜದಲ್ಲಿ ಸಮಾಜದ ಅಧ್ಯಕ್ಷ ವಾಂಚೀರ ವಿಠಲ್ ನಾಣಯ್ಯ ಅವರು ಅಧ್ಯಕ್ಷತೆಯಲ್ಲಿ ಚಿತ್ರ ಬಿಡುಗಡೆ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾಅಚ್ಚಯ್ಯ, ಮಾಜಿ ಸಚಿವ ಮೇರಿಯಂಡ ಸಿ. ನಾಣಯ್ಯ, ಕೊಡಗ್‍ರ ಸಿಪಾಯಿ ಚಿತ್ರದ ನಟ, ನಿರ್ದೇಶಕ, ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಬಾಳುಗೋಡು ಫೆಡರೇಷನ್ ಆಫ್ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶಿಸಿ, ಎಂ.ಡಿ.ಕೌಶಿಕ್ ಸಹ ನಿರ್ದೇಶನ ಮಾಡಿರುವ ಕೊಡವ ಚಲನಚಿತ್ರದಲ್ಲಿ ಖ್ಯಾತ ಅಥ್ಲಿಟ್ ತೀತಮಾಡ ಅರ್ಜುನ್ ದೇವಯ್ಯ ನಾಯಕರಾಗಿ ಹಾಗೂ ತೇಜಸ್ವಿನಿ ಶರ್ಮ ನಾಯಕಿಯಾಗಿ ನಟಿಸಿದ್ದಾರೆ. “ಕೊಡಗ್‍ರ ಸಿಪಾಯಿ” ಬರಹಗಾರ್ತಿ ಉಳುವಂಗಡ ಕಾವೇರಿ ಉದಯ ಅವರ ಕೊಡವ ಕಾದಂಬರಿ ಆಧಾರಿತ ಚಿತ್ರವಾಗಿದೆ.
ನಿರ್ಮಾಣ ಮತ್ತು ನಿರ್ವಹಣೆ ಜವಬ್ದಾರಿಯನ್ನು ಬೊಳ್ಳಜಿರ ಬಿ.ಅಯ್ಯಪ್ಪ ನಿಭಾಯಿಸಿದ್ದು, ಯಶವಂತ್ ಛಾಯಾಗ್ರಹಣ, ಸಂಗೀತ ಆರ್‍ಜೆಬಿ, ಸಂಕಲನ ಸಂಜೀವರೆಡ್ಡಿ, ಚಿತ್ರಕಥೆ-ಸಂಭಾಷಣೆ ಹಂಸರಾಜ್ ಹಾಗೂ ಮಂಜು ಪಾಂಡವಪುರ ಸಹನಿರ್ದೇಶನ ಮಾಡಿದ್ದಾರೆ.
ಮುಂದಿನ ಒಂದು ತಿಂಗಳ ಕಾಲ ಜಿಲ್ಲೆಯ ವಿವಿಧೆಡೆ ಚಿತ್ರ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರ ತಂಡ ತಿಳಿಸಿದೆ.

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ಫಿಲಂವುಡ್